ಕಾಂಗ್ರೆಸ್ ಎಂಎಲ್ಸಿ ನಾರಾಯಣ ಸ್ವಾಮಿ ಮತ್ತು ಮುಖಂಡ ಮನೋಹರ್ ನಡುವೆ ಶುಕ್ರವಾರ ಮಧ್ಯಾಹ್ನ ಗಲಾಟೆ ನಡೆದು, ಉಭಯ ನಾಯಕರು ಕೈ-ಕೈ ಮಿಲಾಯಿಸಿಕೊಂಡಿರುವ ಘಟನೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜರುಗಿದೆ.
ಕಾರ್ಯಾಧ್ಯಕ್ಷರುಗಳ ಸಮ್ಮುಖದಲ್ಲಿಯೇ ಈ ಗಲಾಟೆ ನಡೆದಿದೆ, ಮಾಧ್ಯಮದವರು ಸ್ಥಳಕ್ಕೆ ಹೋಗುತ್ತಿದ್ದಂತೆ ಕಚೇರಿಯ ಬಾಗಿಲನ್ನು ಕಾಂಗ್ರೆಸ್ ಮುಖಂಡರು ಬಂದ್ ಮಾಡಿಕೊಂಡರು.
ಕೆಲ ಸಮಯದ ಬಳಿಕ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಕೆಪಿಸಿಸಿ ಕಚೇರಿಯಿಂದ ಹೊರನಡೆದರು. ಆದರೆ ಈ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಯಾವುದೇ ಗಲಾಟೆ ನಡೆದಿಲ್ಲ ಎಂದು ಹಾರಿಕೆ ಉತ್ತರ ನೀಡಿದರು.
ಇಂದು ಬೆಳಗ್ಗೆ ಪಂಚಾಯಿತಿ ಸದಸ್ಯರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ಅವರು ನಮ್ಮ ಸದಸ್ಯರನ್ನು ಸೆಳೆಯುವ ಕೆಲಸ ಮಾಡಿದ್ದರು. ಆ ವಿಚಾರವಾಗಿ ಜೋರುಜೋರು ಮಾತು ನಡೆಯಿತು.
ಆದರೆ ಯಾರೂ ಯಾರ ಮೇಲೂ ಹಲ್ಲೆ ಮಾಡಿಲ್ಲ. ನಾವು ಬಾಗಿಲು ಹಾಕಿ ಪಕ್ಷದ ವಿಚಾರ ಚರ್ಚೆ ಮಾಡಿದ್ದೇವೆ. ಚರ್ಚೆಯನ್ನ ಹೊರತುಪಡಿಸಿ ಬೇರೆ ಏನು ಆಗಿಲ್ಲ ಎನ್ನುವ ಮೂಲಕ ಘಟನೆಯನ್ನು ಮುಚ್ಚಿಹಾಕಲು ಯತ್ನಿಸಿದರು.
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ
- ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
- ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ