ಬೆಂಗಳೂರು:
ಅಧಿವೇಶನಕ್ಕೆ ಮುನ್ನವೇ ವರಿಷ್ಠರ ಸಲಹೆ ಮೇರೆಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸರ್ಕಾರ ಒಂದು ವರ್ಷ ಪೂರೈಸಿದ ಬಳಿಕ ಮೊದಲ ಬಾರಿಗೆ ನಡೆಸಿದ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಸಂಪುಟ ವಿಸ್ತರಣೆಯಲ್ಲಿ ಯಾರಿಗೂ ಯಾವುದೇ ಗೊಂದಲ ಬೇಡ. ಕೊಟ್ಟ ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಎಲ್ಲಾ ಸಚಿವರು ವಾರದಲ್ಲಿ ಒಂದು ದಿನ ಜಿಲ್ಲಾ ಕೇಂದ್ರಗಳಲ್ಲಿದ್ದು, ಜನಸಾಮಾನ್ಯರ ಅಹವಾಲು ಕೇಳಬೇಕು. ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಬೇಕು. ಪಕ್ಷದ ಕಾರ್ಯಕರ್ತರು ಸಣ್ಣಪುಟ್ಟ ಕೆಲಸಗಳಿಗೆ ಬೆಂಗಳೂರಿಗೆ ಬರಬಾರದು. ಸ್ಥಳೀಯವಾಗಿಯೇ ಅಹವಾಲು, ಸಮಸ್ಯೆಗಳನ್ನು ಬಗೆಹರಿಸಬೇಕು. ಜಿಲ್ಲಾ ಸಚಿವರು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು