ಕಾಲೇಜುಗಳು ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿದೆ. ಶುಲ್ಕ ಕಡಿತವಾಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ
ಈ ಶೈಕ್ಷಣಿಕ ವರ್ಷದಲ್ಲಿ ಪದವಿ ಕಾಲೇಜುಗಳ ಶುಲ್ಕದಲ್ಲಿ ಯಾವುದೇ ಕಡಿತ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಹೇಳಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಸ್ನಾತಕ, ಸ್ನಾತಕೋತ್ತರ ಕೋರ್ಸ್ ಗಳ ಶುಲ್ಕದಲ್ಲಿ ಕಡಿತ ಮಾಡುವುದು ಆಯಾ ಶಿಕ್ಷಣ ಸಂಸ್ಥೆಗಳಿಗೆ ಬಿಟ್ಟ ವಿಚಾರ. ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಈ ಬಗ್ಗೆ ಆಯಾ ಕಾಲೇಜುಗಳೇ ನಿರ್ಧಾರ ಮಾಡಲಿ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳಗೆ ರಾಜ್ಯ ಸರ್ಕಾರ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ. ಈ ಬಾರಿ ಕೋವಿಡ್ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಆಪ್ ಲೈನ್ ಮತ್ತು ಆನ್ ಲೈನ್ ತರಗತಿಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಯಾವುದಾದರೊಂದು ತರಗತಿಗೆ ಕಡ್ಡಾಯವಾಗಿ ಹಾಜರಾಗಲೇ ಬೇಕಾಗಿದೆ. ಪರಿಸ್ಥಿತಿಗೆ ಅನುಗುಣವಾಗಿ ಪೂರ್ಣ ಪ್ರಮಾಣದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ