ಭಾರತದಲ್ಲಿ ನಿಷೇಧಕ್ಕೊಳಗಾಗಿರುವ ಸಿಖ್ ಫಾರ್ ಜಸ್ಟೀಸ್ ಸಂಘಟನೆ ಮಂಗಳವಾರ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರವನ್ನು ನಡೆಸಿದ್ದು ನಾವೇ ಎಂದು ಒಪ್ಪಿಕೊಂಡಿದೆ.
ಅಲ್ಲದೇ, ಕೆಂಪುಕೋಟೆಯ ಬಳಿ ಖಲಿಸ್ತಾನಿ ಬಾವುಟ ಹಾರಿಸಿದವರಿಗೆ 3,50,000 ಡಾಲರ್ ( ಎರಡೂವರೆ ಕೋಟಿ) ಬಹುಮಾನ ನೀಡಲಾಗುವುದು ಎಂದು ಎಸ್ ಎಫ್ ಜೆ ಸಂಘಟನೆ ಘೋಷಣೆ ಮಾಡಿದೆ.
ಸಿಖ್ ಫಾರ್ ಜಸ್ಟೀಸ್ ಸಂಘಟನೆ ಯಿಂದ ಫೆಬ್ರವರಿ 1 ರಂದು ಪಾರ್ಲಿಮೆಂಟ್ಗೆ ಮುತ್ತಿಗೆ ಹಾಕುವಂತೆ ರೈತರಿಗೆ ಕರೆ ನೀಡಿದೆ.
ದೆಹಲಿಯಲ್ಲಿ ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಕಳೆದ 2 ತಿಂಗಳಿನಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಪ್ರತಿಭಟನೆಯ ಅಂಗವಾಗಿ ನಿನ್ನೆ ರೈತರು ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿದರು.
ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ಉಂಟಾಗಿತ್ತು. ಅಲ್ಲದೇ ಕೆಂಪುಕೋಟೆಯ ಬಳಿ ತ್ರಿವರ್ಣ ಧ್ವಜದ ಬದಲಿಗೆ ಬೇರೊಂದು ಧ್ವಜವನ್ನು ಹಾರಿಸಲಾಯಿತು. ಅಲ್ಲದೇ ಪೊಲೀಸರಿಂದ ಮೇಲೆ ಹಲ್ಲೆಯೂ ನಡೆದಿರುವುದನ್ನು ಸ್ಮರಿಸಬಹುದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ