February 22, 2026

Newsnap Kannada

The World at your finger tips!

train ,railway,india

ರಾಯಭಾಗ ಬಳಿ ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

Spread the love

ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ.

ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ.

ಒಂದೇ ಕುಟುಂಬದವರಾದ ತಂದೆ ಬೀರಡಿ ಸಾತಪ್ಪ ಸುತಾರ್( 60) ತಾಯಿ ಮಹಾದೇವಿ (50), ಮಕ್ಕಳಾದ ದತ್ತಾತ್ರೇಯ (28) ಮತ್ತು ಸಂತೋಷ್ (25) ಎಂದು ಗುರುತಿಸಲಾಗಿದೆ.

ಇಂದು ಬೆಳಕಿಗೆ ಬಂದಿರುವ ಈ ಪ್ರಕರಣ ನಡೆದ ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!