ಮೈಸೂರು ರಾಜರು ಯುದ್ಧ ಮಾಡಿದವರಲ್ಲ, ಶೋಕಿಯಾಗಿ ಜೀವನ ನಡೆಸಿದರು ಎಂದು ರಾಜ್ಯ ಜಂಗಲ್ ಲಾಡ್ಜಸ್ ಹಾಗೂ ರೆಸಾರ್ಟ್ಸ್ ನಿಗಮದ ಅಧ್ಯಕ್ಷ ಎಂ.ಅಪ್ಪಣ್ಣ ಅಕ್ಷೇಪಾರ್ಹವಾಗಿ ಹೇಳಿದ್ದಾರೆ.
ಈಡೀ ವಿಶ‍್ವವೇ ಗಮನ ಸೆಳೆಯುವಾಗೆ ನಾಡಿನ ಅಭಿವೃದ್ಧಿಗಾಗಿ ಶ್ರಮಿಸಿದ ಮೈಸೂರು ಮಹಾರಾಜರ ಕುರಿತು ರಾಜ್ಯ ಅರಣ‍್ಯ ವಸತಿ ಹಾಗೂ ವಿಹಾರಧಾಮಗಳ ನಿಗಮದ ಅಧ್ಯಕ್ಷ ಎಂ. ಅಪ್ಪಣ್ಣ ನೀಡಿರುವ ಹೇಳಿಕೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಎಸ್ಟಿ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ನಾಯಕ ಸಮುದಾಯದ ಕುರಿತು ಮಾತನಾಡುವ ಭರದಲ್ಲಿ, ಮೈಸೂರು ರಾಜರು ಎಂದಿಗೂ ಯುದ್ಧ ಮಾಡಿದವರಲ್ಲ. ಶೋಕಿಯಾಗಿ ಸುಖವಾದ ಜೀವನ ನಡೆಸಿದರು. ಆದರೆ ಮದಕರಿ ನಾಯಕನ ವಂಶಸ್ಥರು ನಿಜಕ್ಕೂ ಸೇನೆಯಲ್ಲಿ ಯುದ್ಧ ಮಾಡುವ ಜವಾಬ್ದಾರಿಯನ್ನು ನಿರ್ವಹಣೆ ಮಾಡಿದ್ದಾರೆ ಎಂದು ಹೇಳಿದರು.
ಇವರು ಹೇಳಿಕೆ ನೀಡುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಚರ್ಚೆ, ಟೀಕೆಗಳು ಶುರುವಾಗಿವೆ. ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಅಪ್ಪಣ್ಣ ಹೇಳಿಕೆಯನ್ನು ಅನೇಕರು ಟೀಕಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು