December 25, 2024

Newsnap Kannada

The World at your finger tips!

school , learning , teaching

ಖಾಸಗಿ ಶಾಲೆ ಶುಲ್ಕ 30% ಕಡಿತ: ಆದೇಶ ಪಾಲನೆಗೆ ಜಿಲ್ಲಾ ಮಟ್ಟದಲ್ಲಿ ಸಮಿತಿ : 2 ಕಂತುಗಳಲ್ಲಿ ಶುಲ್ಕ ಪಾವತಿ

Spread the love

ಖಾಸಗಿ ಶಾಲೆಗಲ್ಲಿ ಶೇ.30ರಷ್ಟು ಶುಲ್ಕ ಕಡಿತ ಮಾಡುವ ಮೂಲಕ ಪೋಷಕರಿಗೆ ಸರ್ಕಾರ ಬಿಗ್ ರಿಲೀಫ್ ಕೊಟ್ಟಿದೆ.

ಈ ಕುರಿತಂತೆ ಶಿಕ್ಷಣ ಇಲಾಖೆ ಇದೀಗ ಅಧಿಕೃತ ಆದೇಶ ಹೊರಡಿಸಿ 2 ಕಂತುಗಳಲ್ಲಿ ಶುಲ್ಕ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ ಕಡಿತ ಮಾಡುವಂತೆ ಪೋಷಕರು ಸರ್ಕಾರಕ್ಕೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದರು.

  • 2020-21ನೇ ಸಾಲಿನಲ್ಲಿನ ಶಾಲಾ ಶುಲ್ಕ ಪಾವತಿಗೆ ಸಂಬಂಧಿಸಿದಂತೆ ಶೇ.30ರಷ್ಟು ವಿನಾಯಿತಿಯನ್ನು ನೀಡಲಾಗಿದೆ.
  • ಶಾಲಾ ಬೋಧನಾ ಶುಲ್ಕವನ್ನು ಹೊರತು ಪಡಿಸಿ ಶಾಲೆಗಳು ಬೇರೆ ಯಾವುದೇ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆಯುವಂತಿಲ್ಲ.
  • ಒಂದು ವೇಳೆ ಪೋಷಕರು ಪೂರ್ಣ ಶುಲ್ಕ ಪಾವತಿ ಮಾಡಿದ್ದರೆ, ಅಂತಹ ಶುಲ್ಕವನ್ನು ಮುಂದಿನ ಶೈಕ್ಷಣಿಕ ಅವಧಿಗೆ ಹೊಂದಾಣಿಕೆ ಮಾಡಲು ಸೂಚಿಸಲಾಗಿದೆ.
  • 2 ಹಂತಗಳಲ್ಲಿ ಶಾಲಾ ಶುಲ್ಕ ಪಾವತಿಗೆ ಅವಕಾಶವನ್ನು ಕಲ್ಪಿಸಲಾಗಿದೆ.
  • ಶಿಕ್ಷಣ ಇಲಾಖೆ ಹೊರಡಿಸಿರುವ ಶಾಲಾ ಶುಲ್ಕ ಕಡಿತ ಆದೇಶ ರಾಜ್ಯದಲ್ಲಿರುವ ಎಲ್ಲಾ ಸಿಬಿಎಸ್ಇ, ಐಸಿಎಸ್ ಇ ಹಾಗೂ ರಾಜ್ಯ ಪಠ್ಯಕ್ರಮದಲ್ಲಿ ಪಾಠ ಬೋಧನೆ ಮಾಡುವ ಎಲ್ಲಾ ಶಾಲೆಗಳಿಗೂ ಅನ್ವಯವಾಗಲಿದೆ
  • ಇನ್ನು ಶಾಲಾ ಶುಲ್ಕ ಕಡಿತ ಆದೇಶ ಪಾಲನೆಗೆ ಜಿಲ್ಲೆಗಳಲ್ಲಿ ಸಮಿತಿಗಳನ್ನು ರಚಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

Copyright © All rights reserved Newsnap | Newsever by AF themes.
error: Content is protected !!