ಮಹಿಳಾ ಎಸ್ಐ ಒಬ್ಬರು ಅನಾಥ ಶವಕ್ಕೆ ಹೆಗಲು ಕೊಟ್ಟು ಮಾನವೀಯತೆ ಮೆರೆದಿದ್ದಾರೆ.
ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯೊಂದರ ಗ್ರಾಮದಲ್ಲಿ ಅಪರೂಪದ ಘಟನೆ ನಡೆದಿದೆ.
ಅಡವಿಕೊತ್ತೂರು ಅನ್ನೋ ಗ್ರಾಮದ ಜಮೀನುವೊಂದರಲ್ಲಿ ಅನಾಥ ಶವ ಪತ್ತೆಯಾಗಿತ್ತು. ಕಾಸಿಗುಬ್ಬ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿರೀಶಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು.
ಗ್ರಾಮಸ್ಥರು ಶವವನ್ನು ಹೊತ್ತೊಯ್ಯಲು ಮುಂದೆ ಬರಲಿಲ್ಲ., ತಾವೇ ಶವವನ್ನು ಹೊತ್ತುಕೊಂಡು ಹೋಗಲು ಎಸ್ಐ ಮುಂದಾದರು. ಮತ್ತೋರ್ವ ವ್ಯಕ್ತಿಯ ಜೊತೆ ಶಿರೀಶಾ ಶವವನ್ನು ತಮ್ಮ ಹೆಗಲ ಮೇಲೆ ಹೊತ್ತು ಜಮೀನಿನಿಂದ ವಾಹನವಿದ್ದ ಸ್ಥಳದವರೆಗೆ ಸುಮಾರು ಎರಡು ಕಿಲೋಮೀಟರ್ ದೂರ ನಡೆದುಕೊಂಡು ಹೋಗಿದ್ದಾರೆ.
ಅಂತ್ಯಕ್ರಿಯೆ ನೆರವೇರಿಸಲು ಲಲಿತಾ ಚಾರಿಟೆಬಲ್ ಟ್ರಸ್ಟ್ಗೆ ಮೃತದೇಹವನ್ನು ಹಸ್ತಾಂತರಿಸಿದ್ದಾರೆ.ಒಬ್ಬ ಮಹಿಳಾ ಪೊಲೀಸ್ ಅಧಿಕಾರಿಯ ಮಾಡಿದ ಸಾರ್ಥಕ ಸೇವೆ ಇದು.
- ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗಕ್ಕೆ ಅರ್ಹತೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆಯ ಮುನ್ಸೂಚನೆ
- ಡಿ.9 ರಿಂದ ಬೆಳಗಾವಿಯಲ್ಲಿ ಅಧಿವೇಶನ : ಯು ಟಿ ಖಾದರ್
- ವಯನಾಡಿನ ನೂತನ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ
- ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ವಿಚ್ಛೇದನಕ್ಕೆ ಕೋರ್ಟ್ ಅನುಮೋದನೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ