ಪ್ರೀತಿಸಿ ಅವಳನ್ನು ಕೈಯಾರೆ ಕೊಲೆ ಮಾಡಿ, ನಂತರ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ
ಪ್ರಿಯತಮೆಯನ್ನು ಕೊಲೆ ಮಾಡಿ ತಾನು ಆತ್ಮಹತ್ಯೆ ಶರಣಾದ ಪಾಗಲ್ ಪ್ರೇಮಿ- ಮೈಸೂರಿನ ಹೋಟೆಲ್ ನಲ್ಲಿ ನಡೆದಿರುವ ಘಟನೆ ಮೈಸೂರಿನ ಹೆಬ್ಬಾಳ ಹೋಟೆಲ್ ನಲ್ಲಿ ಕಳೆದ ರಾತ್ರಿ ನಡೆದಿದೆ.
ಮಂಡ್ಯದವರಾದ ಅಮೂಲ್ಯ ಕೊಲೆಯಾಗಿದ್ದಾರೆ. ಲೋಕೇಶ್ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.
ಅಮೂಲ್ಯ ಮೊದಲ ವರ್ಷದ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದಳು. ಲೋಕೇಶ್ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದನು.
ಮೈಸೂರಿನ ಹೆಬ್ಬಾಳು ಬಡಾವಣೆಯ ಹೋಟೆಲ್ ಗೆ ನಿನ್ನೆ ಮಧ್ಯಾಹ್ನ ಆಗಮಿಸಿದ್ದ ಪ್ರೇಮಿಗಳು.ರೂಮಿನಲ್ಲೇ ಉಳಿದುಕೊಂಡಿದ್ದಾರೆ.
ರಾತ್ರಿ ಬಾಗಿಲು ತೆಗೆಯದಿದ್ದಾಗ ಅನುಮಾನಗೊಂಡ ಹೋಟೆಲ್ ಸಿಬ್ಬಂದಿಗಳು ಬಾಗಿಲು ತೆರೆದು ನೋಡಿದಾಗ ಲೋಕೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂತು. ಅಮೂಲ್ಯ ಕೊಲೆಯಾಗಿದ್ದಾಳೆ ಎನ್ನುವುದು ಗೊತ್ತಾಯಿತು.
ರೂಂ ನಲ್ಲಿ ಉಳಿದುಕೊಂಡಿದ್ದ ಅಮೂಲ್ಯ ಹಾಗೂ ಲೋಕೇಶ್ ಮಾತು ಕತೆ ಮಾಡಿದ ನಂತರ ಸಾಯುವ ನಿರ್ಧಾರ ಮಾಡಿದ್ದಾರೆ. ಮೊದಲಿಗೆ ಹಗ್ಗದಲ್ಲಿ ಕತ್ತು ಬಿಗಿದು ಅಮೂಲ್ಯಳನ್ನು ಲೋಕೇಶ್ ಕೊಲೆ ಮಾಡಿದ್ದಾನೆ.
ಸ್ನೇಹಿತರಿಗೆ ಮಾಹಿತಿ ನೀಡಿದ ಲೋಕೇಶ್ :
ಆಕೆಯನ್ನು ಸಾಯಿಸಿದ ಮೇಲೆ ಸ್ನೇಹಿತರಿಗೆ ಕರೆ ಮಾಡಿ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾನೆ
ಅಮೂಲ್ಯಳನ್ನು ನಾನೇ ಕೊಲೆ ಮಾಡಿದೆ. ಈಗ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಗೆಳೆಯರಿಗೆ ದೂರವಾಣಿ ಮೂಲಕ ಹೇಳಿದ್ದಾನೆಂದು ಪೋಲಿಸರು ತಿಳಿಸಿದ್ದಾರೆ.
ಕೊಲೆ ಮತ್ತು ಆತ್ಮಹತ್ಯೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ. ಡಿಸಿಪಿ ಪ್ರಕಾಶ್ ಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಬ್ಬಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ