January 4, 2025

Newsnap Kannada

The World at your finger tips!

sahithy parishth

ಮೇ 9 ರಂದು ಕಸಾಪ ಅಧ್ಯಕ್ಷರ ಚುನಾವಣೆ ಘೋಷಣೆ

Spread the love
  • ಜಿಲ್ಲಾ, ಗಡಿನಾಡು ಘಟಕದ ಅಧ್ಯಕ್ಷರ ಚುನಾವಣೆ ಘೋಷಣೆ

ಮೇ9 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಜಿಲ್ಲಾ, ಗಡಿನಾಡು ಘಟಕದ ಅಧ್ಯಕ್ಷರ ಚುನಾವಣೆ ಘೋಷಣೆ ಮಾಡಲಾಗಿದೆ.

ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿ ಷತ್ತಿನ ಮತದಾರರು ಗೊತ್ತುಪಡಿಸಿರುವ ಮತಗಟ್ಟೆಗಳಲ್ಲಿ ತಮ್ಮ ಮತವನ್ನು ಚಲಾಯಿಸಬಹುದು.

ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಚುನಾವಣಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಪ್ರಕಟಣೆ ನೀಡಿದ್ದಾರೆ.

ಚುನಾವಣಾ ಮಾಹಿತಿಗಳು :

  • 2021ರ ಮೇ 9 ಕ್ಕೆ ಮೂರು ವರ್ಷ ಹಿಂದಿನಿಂದ ಸತತವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರುವವರು ಮಾತ್ರ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರಾಗಿರುತ್ತಾರೆ.
  • ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು ಚುನಾವಣಾ ದಿನಾಂಕಕ್ಕೆ ಹತ್ತು ವರ್ಷಗಳ ಹಿಂದಿನಿಂದ ಸತತವಾಗಿ ಹಾಗೂ ಜಿಲ್ಲಾ, ಗಡಿನಾಡು ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವವರು ಚುನಾವಣಾ ದಿನಾಂಕಕ್ಕೆ ಐದು ವರ್ಷಗಳ ಹಿಂದಿನಿಂದ ಸತತವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು.
  • ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕರ, ಗಡಿನಾಡು ಘಟಕ ಅಧ್ಯಕ್ಷರ ಚುನಾವಣಾ ಅಭ್ಯರ್ಥಿಗಳ ನಾಮಪತ್ರಗಳನ್ನು ಕೇಂದ್ರ ಚುನಾವಣಾಧಿಕಾರಿಗಳ ಕಚೇರಿಗೆ ಮಾಚ್೯ 29 ಸೋಮವಾರದಿಂದ 2021ರ ಏಪ್ರಿಲ್ 7 (ಬುಧವಾರದವರೆಗೆ) ಪ್ರತಿದಿನ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ( ರಜಾ ದಿನಗಳನ್ನು ಹೊರತುಪಡಿಸಿ) ಸ್ವೀಕರಿಸಲಾಗುವುದು.
  • ಜಿಲ್ಲಾ ಘಟಕಗಳ ಅಧ್ಯಕ್ಷರ ಚುನಾವಣೆ ಸಂಬಂಧ ನಾಮಪತ್ರಗಳನ್ನು ಆಯಾ ಜಿಲ್ಲಾ ಕೇಂದ್ರದ ತಾಲೂಕು ತಹಶೀಲ್ದಾರ ( ಜಿಲ್ಲಾ ಕ.ಸಾ.ಪ ಚುನಾವಣಾಧಿಕಾರಿಗಳು) ಕಚೇರಿಯಲ್ಲಿ ಸ್ವೀಕರಿಸಲಾಗುವುದು.
  • ನಾಮಪತ್ರದ ನಮೂನೆಗಳನ್ನು ಒಂದು ಪ್ರತಿಗೆ 10 ರೂ ನಂತೆ ಪಾವತಿ ಮಾಡಿ ಕಚೇರಿ ವೇಳೆಯಲ್ಲಿ ಪಡೆಯಬಹುದು.
  • ಈ ಎಲ್ಲಾ ನಾಮಪತ್ರಗಳನ್ನು 2021ರ ಏಪ್ರಿಲ್ 8 ರಂದು ಬೆಳಿಗ್ಗೆ 11 ಗಂಟೆಗೆ ಸಂಬಂಧಿಸಿದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪರಿಶೀಲನೆ ಮಾಡಲಾಗುವುದು.
  • ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು 2021ರ ಏಪ್ರಿಲ್ 12 ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶವಿರುತ್ತದೆ.
  • 2021ರ ಏಪ್ರಿಲ್ 12 ಅಂತಿಮವಾಗಿ ಸ್ಪರ್ಧೆಯಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುವುದು
  • ಕರ್ನಾಟಕ ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್ತಿನ ಮತದಾರರು ಅವರಿಗೆ ಗೊತ್ತುಪಡಿಸಿರುವ ಮತಗಟ್ಟೆಗಳಲ್ಲಿ 2021ರ ಮೇ 9 ರಂದು ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಮ್ಮ ಮತವನ್ನು ಚಲಾಯಿಸುವುದು.
  • 2021ರ ಮೇ 11 ರಂದು ಗಡಿನಾಡು ಘಟಕಗಳ ಅಧ್ಯಕ್ಷರ ಫಲಿತಾಂಶಗಳನ್ನು ಘೋಷಣೆ ಮಾಡಲಾಗುತ್ತದೆ.
  • 2021ರ ಮೇ12. ರಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಚುನಾವಣಾ ಫಲಿತಾಂಶ ಪ್ರಕಟ.

Copyright © All rights reserved Newsnap | Newsever by AF themes.
error: Content is protected !!