ಕೌಟುಂಬಿಕ ಕಲಹಕ್ಕೆ ಬೇಸತ್ತು ಮಗನೊಂದಿಗೆ ತಾಯಿ ಆತ್ಮಹತ್ಯೆ
ಕೌಟುಂಬಿಕ ಕಲಹಕ್ಕೆ ನೊಂದು ಮಗನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನನ ಹೂಗ್ಯಂ ಗ್ರಾಮದಲ್ಲಿ ಜರುಗಿದೆ.
ತಮಿಳುನಾಡಿನ ಬರಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಜ್ಜಲ ಪಾಳ್ಯ ಗ್ರಾಮದ ಚಿನ್ನಮ್ಮ (35), ಮಗ ಮಹದೇವಸ್ವಾಮಿ (14) ಆತ್ಮಹತ್ಯೆ ಮಾಡಿಕೊಂಡವರು.
ನೆರೆಯ ತಮಿಳುನಾಡಿನಿಂದ ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ಬಂದು ನೆಲೆಸಿದ್ದರು.
ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಜಮೀನನ್ನು ಗುತ್ತಿಗೆ ಪಡೆದು ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಕುಟುಂಬದಲ್ಲಿ ಸದಾ ಕಲಹ ನಡೆಯುತ್ತಿತ್ತು. ಬುಧವಾರ ರಾತ್ರಿ ಕುಟುಂಬ ಕಲಹದಿಂದ ಬೇಸತ್ತು ಹೂಗ್ಯಂ ಗ್ರಾಮದ ಸಮೀಪ ಇರುವ ಜಲಾಶಯದಲ್ಲಿ ಮಗನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.
ಗ್ರಾಮಸ್ಥರು ಗುರುವಾರ ಬೆಳಿಗ್ಗೆ ನೀರಿನಲ್ಲಿ ತೇಲುತ್ತಿರುವ ಶವಗಳನ್ನು ನೋಡಿ ರಾಮಪುರ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ರಾಮಪುರ ವೃತ್ತನಿರೀಕ್ಷಕ ನಂಜುಂಡಸ್ವಾಮಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು