January 10, 2025

Newsnap Kannada

The World at your finger tips!

meera ragavendra

ಮಸಿ ಬಳಿದ ಮೀರಾ ವಿರುದ್ಧ ಭಗವಾನ್‌ ದೂರು, ಎಫ್‌ಐಆರ್‌ ದಾಖಲು

Spread the love

ಬೆಂಗಳೂರಿನ ಸಿವಿಲ್ ಕೋರ್ಟ್‌ ಆವರಣದಲ್ಲಿ ತನ್ನ ಮೇಲೆ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಸಾಹಿತಿ ಭಗವಾನ್‌ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೀರಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮೀರಾ ವಿರುದ್ದ ಐಪಿಸಿ ಸೆಕ್ಷನ್‌ 341(ಅಕ್ರಮವಾಗಿ ತಡೆಯವುದು), 504(ಅವಾಚ್ಯವಾಗಿ ನಿಂದನೆ)ಅಡಿ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಾದ ಬಳಿಕ ಭಗವಾನ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ವಕೀಲೆ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು.

ಇಂದು ಈ ಪ್ರಕರಣ ಸಂಬಂಧ ಜಾಮೀನು ವಿಚಾರಣೆಗೆ ಭಗವಾನ್‌ ಕೋರ್ಟ್‌ಗೆ ಆಗಮಿಸಿದ್ದರು. ಈ ವೇಳೆ ಮೀರಾ ರಾಘವೇಂದ್ರ ಭಗವಾನ್‌ ಮುಖಕ್ಕೆ ಮಸಿ ಬಳಿದಿದ್ದಾರೆ.

ಬುದ್ಧಿಜೀವಿ, ಧರ್ಮ ವಿರೋಧಿ ಪ್ರೊ ಭಗವಾನ್ ಇಂದು ಕೋರ್ಟ್ ಕಟಕಟೆಗೆ ಹಾಜರಾಗಿ ಜಾಮೀನು ಪಡೆದುಕೊಂಡರು. ಅವರಿಗೆ ಮಸಿ ಬಳಿದು ತಕ್ಕ ಶಾಸ್ತಿ ಮಾಡಿದ್ದೇನೆ. ಜೈಶ್ರೀರಾಮ್ ಎಂದು ಮೀರಾ ರಾಘವೇಂದ್ರ ಟ್ವೀಟ್‌ ಮಾಡಿ ವಿಡಿಯೋ ಅಪ್ಲೋಡ್‌ ಮಾಡಿದ್ದಾರೆ.

ಹಿಂದೂ ಧರ್ಮವೆಂಬುದೆ ಇಲ್ಲ. ಹಿಂದೂ ಧರ್ಮ ಅವಮಾನಕಾರ. ಮಾನ ಮರ್ಯಾದೆ ಇದ್ದವರು ಹಿಂದೂ ಧರ್ಮ ಬಳಸಬಾರದು ಎಂದು ಭಗವಾನ್‌ ಹೇಳಿಕೆ ನೀಡಿದ್ದರು. ಈ ಸಂಬಂಧ 2020ರ ಅಕ್ಟೋಬರ್‌ 10 ರಂದು ಭಗವಾನ್ ವಿರುದ್ಧ ಮೀರಾ ರಾಘವೇಂದ್ರ ಕ್ರಿಮಿನಲ್‌ ಕೇಸ್‌ ಹೂಡಿದ್ದರು. ಈ ಪ್ರಕರಣ ಸಂಬಂಧ ‌ ವಿಚಾರಣೆಗೆ ಹಾಜರಾಗುವಂತೆ ಭಗವಾನ್‌ಗೆ ಕೋರ್ಟ್ ಸಮನ್ಸ್‌ ಜಾರಿ ಮಾಡಿತ್ತು.

Copyright © All rights reserved Newsnap | Newsever by AF themes.
error: Content is protected !!