February 22, 2026

Newsnap Kannada

The World at your finger tips!

chitradurga camar

ಚಿತ್ರದುರ್ಗದ ಪತ್ರಕರ್ತನ ಕುಟುಂಬಕ್ಕೆ ಸಿಎಂ ನೆರವು

Spread the love

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟ ರಾಜ್ ಟಿವಿ ಕ್ಯಾಮರಾಮೆನ್ ವಿನಾಯಕ ಅವರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.

ಸಂಕಷ್ಟದಲ್ಲಿರುವ ವಿನಾಯಕ ಅವರ ಕುಟುಂಬಕ್ಕೆ ನೆರವು ನೀಡುವಂತೆ ಇತ್ತೀಚೆಗೆ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದಾಗ ಅಲ್ಲಿನ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು, ರಾಜ್ಯ ಸಂಘಕ್ಕೆ ಮನವಿ ಮಾಡಿತ್ತು.

ಸಂಕಷ್ಟದಲ್ಲಿದ್ದ ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರು ಕೃತಜ್ಞತೆ ಸಲ್ಲಿಸಿದ್ದಾರೆ

error: Content is protected !!