ರಾಜ್ಯದಲ್ಲಿ ಆಸ್ತಿ ತೆರಿಗೆ ಹೆಚ್ಚಳ : ಎರಡು ತಿದ್ದುಪಡಿ ವಿಧೇಯಕಗಳಿಗೆ ವಿಧಾನ ಸಭೆ ಅನುಮೋದನೆ

Team Newsnap
1 Min Read

ರಾಜ್ಯದಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಲು ಸರ್ಕಾರ ಹಸಿರು ನಿಶಾನೆ ತೋರಿದೆ.

ಮಹಾನಗರ ಪಾಲಿಕೆ, ಪುರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾದ ಎರಡು ತಿದ್ದುಪಡಿ ವಿಧೇಯಕಗಳಿಗೆ ವಿಧಾನ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪರಿಷ್ಕರಣೆಯಾಗಲಿದೆ. ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ನಗರಪಾಲಿಕೆಗಳ ಆಸ್ತಿ ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದ ಕರ್ನಾಟಕ ನಗರಪಾಲಿಕೆಗಳ ತಿದ್ದುಪಡಿ ವಿಧೇಯಕ -2021 ಮಂಡಿಸಿದ್ದಾರೆ.

ಪುರಸಭೆಗಳಿಗೆ ಸಂಬಂಧಿಸಿದ ವಿಧೇಯಕವನ್ನು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಮಂಡಿಸಿ ವಿವರಣೆ ನೀಡಿದ್ದಾರೆ.

ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು, ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಬಾರದೆಂದು ಒತ್ತಾಯಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಲು, ಸರ್ಕಾರದ ಅನುದಾನ ಅವಲಂಬನೆ ತಪ್ಪಿಸಲು, ಅಭಿವೃದ್ಧಿ ಕೆಲಸ ಮೂಲಸೌಕರ್ಯ ಕಲ್ಪಿಸಲು, ಹೆಚ್ಚಿನ ಸಂಪನ್ಮೂಲ ಸಂಗ್ರಹಕ್ಕೆ ಅನುಕೂಲವಾಗುವಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

  • ಆಸ್ತಿ ತೆರಿಗೆ ಪಾವತಿದಾರರಿಗೆ ಏಪ್ರಿಲ್ ವರೆಗೆ ಶೇಕಡ 5 ರಷ್ಟು ರಿಯಾಯಿತಿ
  • ಆಸ್ತಿ ತೆರಿಗೆ ವ್ಯವಸ್ಥೆ ಪರಿಷ್ಕರಣೆ ಹಾಗೂ ಸರಳೀಕೃತ ಆಸ್ತಿ ತೆರಿಗೆ ವ್ಯವಸ್ಥೆ ಜಾರಿಗೆ ಬರಲಿದೆ.
  • ಬೇರೆ ಬೇರೆ ಪ್ರದೇಶ, ಕಟ್ಟಡ, ನಿವೇಶನಗಳಿಗೆ ಬೇರೆ ಬೇರೆ ತೆರಿಗೆ ದರ ನಿಗದಿ
saraswathi
Share This Article
Leave a comment