ಅಹ್ಮದಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದ ಪ್ರಧಾನಿ ಮೋದಿ ಅಣ್ಣನ ಮಗಳು ಸೋನಾಲ್ ಮೋದಿಗೂ ಬಿಜೆಪಿ ಟಿಕೆಟ್ ನೀಡಲು ನಿರಾಕರಣೆ ಮಾಡಿದೆ.
ಹೊಸ ನಿಯಮದಂತೆ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಳ್ಳಲು ಸೋನಾಲಿ ವಿಫಲರಾಗಿದ್ದಾರೆ
ಫೆ 28 ರಂದು ಚುನಾವಣೆ:
ಗುಜರಾತ್ನ 81 ಮಹಾನಗರ ಪಾಲಿಕೆಗೆ, 31 ಜಿಲ್ಲಾ ಪಂಚಾಯತ್ಗೆ, 231 ತಾಲೂಕು ಪಂಚಾಯತ್ಗೆ ಫೆಬ್ರವರಿ 28 ರಂದು ಚುನಾವಣೆ ನಡೆಯಲಿದೆ.
ಬಿಜೆಪಿ ಅಹ್ಮದಾಬಾದ್ ಮುನ್ಸಿಪಾಲ್ ಕಾರ್ಪೊರೇಷನ್ (AMC) ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆ ಪಟ್ಟಿಯಲ್ಲಿ ಸೋನಾಲ್ ಮೋದಿ ಅವರು ಹೆಸರು ಇಲ್ಲ. ಸೋನಾಲ್ ಅವರ ಬೋದಕ್ ದೇವ್ ವಾರ್ಡ್ನಿಂದ ಸ್ಪರ್ಧಿಸಲು ನಿರ್ಧರಿಸಿದ್ದರು.
ಅಭ್ಯರ್ಥಿಗಳಿಗೆ ಹೊಸ ನಿಯಮಗಳನ್ನು ವಿಧಿಸಲಾಗಿದ್ದು, ಈ ನಿಯಮದ ಪ್ರಕಾರ ಸೋನಾಲ್ ಮೋದಿಗೆ ಟಿಕೆಟ್ ಸಿಗಲಿಲ್ಲ ಅಂತಾ ಹೇಳಲಾಗಿದೆ.
30 ವರ್ಷದ ಸೋನಾಲ್ ಮೋದಿ ಗೃಹಿಣಿಯಾಗಿದ್ದಾರೆ. ಇವರು ಪ್ರಧಾನಿ ಮೋದಿಯ ಸಹೋದರ ಪ್ರಹ್ಲಾದ್ ಮೋದಿ ಮಗಳು. ಅಹ್ಮದಾಬಾದ್ ನಗರದಲ್ಲಿ ನ್ಯಾಯಬೆಲೆ ಅಂಗಡಿ ಹೊಂದಿದ್ದಾರೆ. ಅಲ್ಲದೇ ಗುಜರಾತ್ ಫೇರ್ ಪ್ರೈಸ್ ಶಾಪ್ ಅಸೋಸಿಯೇಷನ್ನ ಅಧ್ಯಕ್ಷರು ಕೂಡ ಆಗಿದ್ದಾರೆ.
ನಾನು ಪ್ರಧಾನಿ ಮೋದಿ ಅಣ್ಣನ ಮಗಳಾಗಿ ಚುನಾವಣೆಗೆ ನಿಲ್ಲಲು ಇಷ್ಟಪಡುವುದಿಲ್ಲ. ಬದಲಾಗಿ ಬಿಜೆಪಿ ಕಾರ್ಯಕರ್ತರಾಗಿ ನಾನು ಚುನಾವಣೆ ಅಖಾಡಕ್ಕೆ ಇಳಿಯಲು ಇಷ್ಟಪಡುತ್ತೇನೆ ಅಂತಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ಟಿಕೆಟ್ ನಿರಾಕರಣೆ ಮಾಡಲಾಗಿದೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್