ಬೆಂಗಳೂರಿನ ವಿವಿಧ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳ ತಂಡ ಕತ್ತಲಾಗುತ್ತಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿಯ ವೇಳೆ ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡುವ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಿತಿನ್ ಗೌಡ ( 19 ವರ್ಷ), ಹೃತಿಕ್ (19 ವರ್ಷ ), ಯಲಹಂಕದ ಮಲ್ಲಿಕಾರ್ಜುನ (19 ವರ್ಷ ) ಮತ್ತು ಬೆಂಗಳೂರು ಅಮೃತಹಳ್ಳಿ ಹರ್ಷಿತ್ (22 ವರ್ಷ ) ಬಂಧಿತರರು.
ತಂಡದಲ್ಲಿದ್ದ ಅಮೃತಹಳ್ಳಿಯ ನಿವಾಸಿ ರಾಜವರ್ಧರ್ ಎಂಬಾತ ಪರಾರಿ
ಯಾಗಿದ್ದಾನೆ.
ರಾತ್ರಿಯಾಗುತ್ತಿದ್ದಂತೆಯೇ ಹೆದ್ದಾರಿಗೆ ಬರುತ್ತಿದ್ದ ಯುವಕರ ತಂಡ ರಸ್ತೆಯಲ್ಲಿ ತೆರಳುವ ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿತ್ತು.
ಕೊಣನೂರು- ಕುಶಾಲನಗರ ರಾಜ್ಯ ಹೆದ್ದಾರಿಯ ಸಿದ್ದಾಪುರದ ಬಳಿ ಎಡ ಭಾಗದಲ್ಲಿ ಐವರು ಯುವಕರು ಮಾರಕಾಸ್ತ್ರಗಳನ್ನು ತೋರಿಸಿ ದರೋಡೆಗೆ ಯತ್ನಿಸುತ್ತಿದ್ದರು.
ಈ ವೇಳೆಯಲ್ಲಿ ಕೊಣನೂರು ಪೊಲೀಸ್ ಠಾಣೆಯ ಪಿಎಸ್ ಐ ಅಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ,
ಆರೋಪಿಗಳಿಂದ ಬ್ಲೇಟ್, ಕಬ್ಬಿಣದ ರಾಡ್ ಸೇರಿದಂತೆ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಪರಾರಿಯಾಗಿರುವ ಆರೋಪಿಗಾಗಿ ಬಲೆ ಬೀಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು