ಪಾಪ್ ಗಾಯಕಿ ರಿಹನ್ನಾ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಸದಾನಂದಗೌಡ

Team Newsnap
1 Min Read

ರಿಹಾನಾಗೆ ರೈತರ ಶ್ರಮದ ಬಗ್ಗೆ ಏನು ಗೊತ್ತು? ರಿಹಾನಾ ಭತ್ತದ ಗದ್ದೆ ನೋಡಿದ್ದಾರಾ? ಎಂದು ಕೇಂದ್ರ ಸಚಿವ ಸದಾನಂದಗೌಡ ಪಾಪ್ ಗಾಯಕಿ ರಿಹಾನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಶನಿವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪಾಪ್ ಗಾಯಕಿ ರಿಹಾನ ಅವರಿಗೆ ರೈತರ ಕಷ್ಟದ ಬಗ್ಗೆ ಏನು ಗೊತ್ತಿದೆ. ಅವರಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ರಿಹಾನಾ ಭತ್ತದ ಗದ್ದೆ ಮುಂದೆ ನಿಂತು ಫೋಟೋ ತೆಗೆಸಿಕೊಂಡು ಹೋಗಿರಬಹುದು ಅಷ್ಟೇ. ಆದರೆ, ರೈತರ ಶ್ರಮ ಬಗ್ಗೆ ತಿಳಿದಿಲ್ಲ ಎಂದು ಕಿಡಿಕಾರಿದರು.

ವಿದೇಶಿ ಕೈಗೊಂಬೆಯಾಗಿ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ರೈತರು ಹೇಗೆ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ ಎಂಬ ವಿಚಾರವನ್ನು ಅವರು ತಿಳಿದುಕೊಂಡಿದ್ದಾರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೂ ರೈತನಿಗೆ ಇನ್ನು ಸ್ವಾತಂತ್ರ್ಯ ದೊರಕಿಲ್ಲ. ರೈತರು ತಮಗೆ ಬೇಕಾದವರಿಗೆ ಬೆಳೆ ಮಾರಾಟ ಮಾಡಲು ಸ್ವಾತಂತ್ರ್ಯ ಇಲ್ಲವಾಗಿದೆ. ಹಾಗಾಗಿ ರೈತನಿಗೆ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಲು ಸ್ವಾತಂತ್ರ್ಯ ನೀಡುತ್ತಿದ್ದೇವೆ. ತನ್ನ ಬೆಳೆಗೆ ಯಾರಾದರೂ ಹೆಚ್ಚು ಬೆಲೆ ಕೊಡುವವರಿಗೆ ಮಾರಾಟ ಮಾಡಲಿ ಎಂದರು.

ರೈತರು ಬಂಡವಾಳ ಶಾಹಿಗಳ ಕೈಗೊಂಬೆಯಾಗುತ್ತಾರೆ ಎನ್ನುವುದು ಸುಳ್ಳು. ರೈತರು ಎಪಿಎಂಸಿ ಕೈಗೊಂಬೆಯಾಗಿ ಇರುವುದು ಬೇಡ. ಸ್ವತಂತ್ರವಾಗಿ ಬೆಳೆ ಮಾರಾಟ ಮಾಡಲು ಅವಕಾಶ ಕೊಟ್ಟಿದ್ದೇವೆ. ಆದರೆ, ಪಟ್ಟಭದ್ರ ಹಿತಾಸಕ್ತಿಯಿಂದ ರೈತರ ಪ್ರತಿಭಟನೆ ನಡೆಯುತ್ತಿದೆ ಎಂದು ಆರೋಪಿಸಿದರು‌.

Share This Article
Leave a comment