ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ವಯಸ್ಸಾದ ಹಸುಗಳನ್ನು ಸರ್ಕಾರ ಖರೀದಿ ಮಾಡುವುದಿಲ್ಲ, ಆದರೆ ಗೋಶಾಲೆಗಳಿಗೆ ಬಿಡಲು ಅವಕಾಶವಿದೆ. ಇವುಗಳ ನಿರ್ವಹಣೆಗೆ ಸರ್ಕಾರದಿಂದ ಅನುದಾನ ನೀಡಲಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚೌವ್ಹಾಣ್ ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರೇತರ ಸಂಸ್ಥೆಗಳು, ಖಾಸಗಿ ಗೋಶಾಲೆಗಳು, ಮಠಗಳಿಗೆ ಇಂತಹ ಗೋವುಗಳನ್ನು ನಿರ್ವಹಣೆ ಮಾಡಲು ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದರು.
ಗೋ ಹತ್ಯೆ ನಿಷೇಧ ಕಾಯ್ದೆಯಿಂದ ರೈತರಿಗೆ, ವೃತ್ತಿನಿರತರಿಗೆ ಹಾಗೂ ಸೇವಿಸುವವರಿಗೆ ಯಾವುದೇ ಗಂಭೀರ ಸಮಸ್ಯೆ ಆಗಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. 13 ವರ್ಷ ಮೇಲ್ಪಟ್ಟ ಎಮ್ಮೆ/ ಕೋಣಗಳನ್ನು ಮಾಂಸಕ್ಕಾಗಿ ವಧೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು