ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಸಭಾಪತಿ ಸ್ಥಾನದ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಮಾಜಿ ಸಚಿವ ಹೆಚ್.ಡಿ ರೇವಣ್ಣ ನೀಡಿದ್ದ ಸಲಹೆಯಂತೆ ಶುಭ ಗಳಿಗೆಯಲ್ಲಿ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ಹೊರಟ್ಟಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಹೊರಟ್ಟಿಗೆ ಪರಿಷತ್ ಸದಸ್ಯ ಶ್ರೀಕಂಠೇಗೌಡ, ಅಪ್ಪಾಜಿಗೌಡ ಬಿಜೆಪಿಯ ಕೋಟಾ ಶ್ರೀನಿವಾಸ್ ಪೂಜಾರಿ, ಮಹಾಂತೇಶ್ ಕವಟಗಿಮಠ್, ರಘುನಾಥ್ ಮಲ್ಕಾಪುರೆ ಸೇರಿದಂತೆ ಹಲವರು ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ಬಸವರಾಜ್ ಹೊರಟ್ಟಿ ನಾನು ಬಿಜೆಪಿ ಬೆಂಬಲದೊಂದಿಗೆ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದೇನೆ. ಕಾಂಗ್ರೆಸ್ ನವರು ಅಭ್ಯರ್ಥಿ ಹಾಕಿದರೆ ನಾನೇನು ಹೇಳಲಿ, ಆ ಬಗ್ಗೆ ನಾನು ಮಾತನಾಡುವುದಿಲ್ಲ. ನನಗೆ ಒಳ್ಳೆ ಅವಕಾಶ ಸಿಗುತ್ತಿದೆ ಎಂದಿದ್ದಾರೆ.
ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ಮಾತನಾಡಿ, ಹೊರಟ್ಟಿ ಅವರಿಗೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಿದೆ. ಕಾಂಗ್ರೆಸ್ ನವರು ಅಭ್ಯರ್ಥಿ ಹಾಕದೇ ಇದ್ದಲ್ಲಿ ಹೊರಟ್ಟಿ ಅವಿರೋಧ ಆಯ್ಕೆಯಾಗಲಿದ್ದಾರೆ ಎಂದರು.
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ
- ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
- ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ