ಬಿಜೆಪಿ ಮುಖಂಡನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರು ಇನಾಮು ನೀಡುವುದಾಗಿ ಕಾಂಗ್ರೆಸ್ ನಾಯಕಿ, ಮಾಜಿ ಕಾರ್ಪೊರೇಟರ್ ಘೋಷಣೆ ಮಾಡಿದ್ದಾರೆ.
ಮಂಗಳೂರಿನ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ ನೀಡುತ್ತೇನೆ ಎಂದು ಬಿಲ್ಲವ ಸಮುದಾಯದ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಕೋಟಿ ಚೆನ್ನೈಯ್ಯರ ವಿರುದ್ಧ ಕೀಳಾಗಿ ಮಾತನಾಡಿದ್ದರು. ನಾಲ್ಕು ದಿನಗಳ ಒಳಗಾಗಿ ಜಗದೀಶ್ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿಯುತ್ತೇವೆ. ಹೀಗೆ ಮಸಿ ಬಳಿಯುವ ಬಿಲ್ಲವ ಯುವಕರಿಗೆ 1 ಲಕ್ಷ ನೀಡುವುದಾಗಿ ಘೋಷಿಸಿದ್ದಾರೆ.
ನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಗದೀಶ್ ಅಧಿಕಾರಿ, ಜನಾರ್ಧನ ಪೂಜಾರಿ ಹಾಗೂ ಕೋಟಿ ಚೆನ್ನೈಯ್ಯರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಕುರಿತ ಆಡಿಯೋ ವೈರಲ್ ಆಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು