ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್‍ಗೆ ಹೈ ಕೋರ್ಟ್ ಏಕ ಸದಸ್ಯ ಪೀಠ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಈ ಜಾಮೀನು ಮಂಜೂರಿನಿಂದಾಗಿ ಹಲವು ದಿನಗಳ ಜೈಲು ವಾಸದ ಬಳಿಕ ಸಂಪತ್ ರಾಜ್‍ಗೆ ಜಾಮೀನು ಭಾಗ್ಯ ದೊರಕಿದೆ.
ನವೆಂಬರ್ 16ರಂದು ರಾತ್ರಿ 9 ಗಂಟೆಗೆ ಸಂಪತ್ ರಾಜ್ ಬಂಧನ ಮಾಡಲಾಗಿತ್ತು. ಒಂದು ತಿಂಗಳಿನಿಂದ ಎಸ್ಕೇಪ್ ಆಗಿದ್ದ ಮಾಜಿ ಮೇ ಯರ್ ಸಂಪತ್ ರಾಜ್ ನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದರು.
ಕೊರೊನಾ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸಂಪತ್ ರಾಜ್ ಗುಣಮುಖವಾದ ಬಳಿಕ ಎಸ್ಪೇಕ್ ಆಗಿ ನಾಗರಹೊಳೆಯ ಫಾರ್ಮ್ ನಲ್ಲಿ ಆಶ್ರಯ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.
ರಿಯಾಜುದ್ದೀನ್ ತನ್ನ ಕಾರಿನಲ್ಲಿಯೇ ಸಂಪತ್ ರಾಜ್ ನನ್ನು ಕರೆದುಕೊಂಡು ತನ್ನ ಆಪ್ತರ ಬಳಿ ಬಿಟ್ಟಿದ್ದನು.
ರಿಯಾಜುದ್ದೀನ್ ಶಿಷ್ಯರ ಚಲನವಲನ ಮೇಲೆಯೂ ಸಿಸಿಬಿ ತಂಡ ಕಣ್ಣಿಟ್ಟಿತ್ತು. ರಿಯಾಜುದ್ದೀನ್ ಶಿಷ್ಯರು ಸಂಪತ್ ರಾಜ್ ಜೊತೆ ನೇರ ಸಂಪರ್ಕ ಹೊಂದಿದ್ದರು ಎನ್ನಲಾಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ