ತಮಿಳುನಾಡಿನ ಶಿವಕಾಸಿ ಬಳಿಯ ಸತ್ತೂರಿನ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಮಂದಿ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.
ಎಎನ್‌ಐ ಸುದ್ದಿ ಸಂಸ್ಥೆ ವರದಿ ಮೂಲದಂತೆ ತಮಿಳುನಾಡಿನ ಶಿವಕಾಸಿ ಬಳಿಯ ಸತ್ತೂರಿನ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿ ಕೊಂಡಿದೆ. ಈ ಅವಘಡದಲ್ಲಿ ಇದುವರೆಗೆ 11 ಮಂದಿ ಮೃತಪಟ್ಟಿದ್ದಾರೆ ಎಂದು ವಿರುಧುನಗರ ಜಿಲ್ಲಾಧಿಕಾರಿ ಆರ್. ಕಣ್ಣನ್ ತಿಳಿಸಿದ್ದಾರೆ.
ಘಟನೆ ಸಂಭಸಿದ್ದು ಹೇಗೆ?
ಪಟಾಕಿ ತಯಾರಿಸಲು ಕೆಲವು ನಿರ್ದೀಷ್ಟ ರಾಸಾಯನಿಕಗಳನ್ನು ಬೆರೆಸುತ್ತಿರುವಾಗ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಚ್ಚನ್‌ಕುಲಂ ಗ್ರಾಮಕ್ಕೆ ಧಾವಿಸಿರುವ 10 ರಷ್ಟು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಘಟನೆಯಲ್ಲಿ 10ರಷ್ಟು ಮಂದಿ ಗಾಯಗೊಂಡಿದ್ದಾರೆ.
ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೋದಿ ಸಂತಾಪ- ಪರಿಹಾರ ಘೋಷಣೆ:
ತಮಿಳುನಾಡು ಶಿವಕಾಸಿ ಬಳಿ ಪಟಾಕಿ ಕಾರ್ಖಾನೆ ಸ್ಫೋಟ ದುರುಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪವನ್ನು ಸೂಚಿಸಿದ್ದಾರೆ.
ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರು.ಗಳ ಪರಿಹಾರ ಘೋಷಿಸಿದ್ದಾರೆ.
ರಾಹುಲ್ ಸಂತಾಪ:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ಮೃತಪಟ್ಟವರಿಗೆ ಸಂತಾಪವನ್ನು ಸೂಚಿಸಿದ್ದಾರೆ.
ಅಲ್ಲದೆ ತುರ್ತಾಗಿ ರಕ್ಷಣಾ ಕಾರ್ಯಾಚರಣೆಗೆ ಬೇಕಾದ ಎಲ್ಲ ನೆರವು ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ