ಪ್ರೇಮಿಗಳ ದಿನವಾದ ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಗಳು ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಪುತ್ರ ಅಮರ್ಥ್ಯ ಹೆಗ್ಡೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಅದ್ದೂರಿಯಾಗಿ ಮಗಳ ಮದುವೆ ಮಾಡಿರುವ ಡಿ.ಕೆ ಶಿವಕುಮಾರ್ ಕೊರೋನಾ ಹಿನ್ನೆಲೆಯಲ್ಲಿ 800 ಅತಿ ಗಣ್ಯರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಿದ್ದರು.
ಡಿ.ಕೆ ಶಿವಕುಮಾರ್ ತವರು ಕ್ಷೇತ್ರ ಕನಕಪುರದ ಜನರಿಗೆ ತಮ್ಮ ಮಗಳ ಮದುವೆಯ ಉಡುಗೊರೆ ನೀಡಿದ್ದಾರೆ. ತಮ್ಮ ಊರುಗಳಿಂದಲೇ ಮದುವೆಗೆ ಹಾರೈಸುವಂತೆ ಸ್ವೀಟ್ ಬಾಕ್ಸ್ಗಳನ್ನು ಕೂಡ ಹಂಚಿದ್ದಾರೆ.
ರಾಮನಗರ ಜಿಲ್ಲೆಯ ಕನಕಪುರ ವಿಧಾನಸಭಾ ಕ್ಷೇತ್ರದ 2.5 ಲಕ್ಷ ಜನರಿಗೆ ಡಿಕೆ ಶಿವಕುಮಾರ್ ಉಡುಗೊರೆ ನೀಡಿದ್ದಾರೆ. ಪುರುಷ ಮತದಾರರಿಗೆ ರೇಡ್ ಅಂಡ್ ಟೇಲರ್ ಕಂಪನಿಯ ಪ್ಯಾಂಟ್, ಶರ್ಟ್ ಹಾಗೂ ಮಹಿಳಾ ಮತದಾರರಿಗೆ ಬನಾರಸ್ ಸೀರೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಕನಕಪುರ ಕ್ಷೇತ್ರದ ಪ್ರತಿ ಗ್ರಾಮದ ಜನರಿಗೂ ಉಡುಗೊರೆ ಹಂಚಿಕೆ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು