ಇನ್ನು ಮುಂದೆ ನಿಮ್ಮ ಮನೆಯಲ್ಲಿ ಟಿ.ವಿ, ಬೈಕು, ಫ್ರಿಡ್ಜ್ ಇದ್ದರೆ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಲು ಸರ್ಕಾರ ನಿರ್ಧರಿಸಿದೆ.
ಈ ವಿಷಯವನ್ನು ಬೆಳಗಾವಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ
5 ಎಕರೆಗಿಂತ ಹೆಚ್ಚಿನ ಜಮೀನು, ಮನೆಯಲ್ಲಿ ಬೈಕ್, ಟೀವಿ, ಫ್ರಿಡ್ಜ್ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುವುದು ಎಂದು ಸ್ಪಷ್ಟವಾಗಿ ಹೇಳಿದರು.
ಮಾಚ್೯ 31 ರೊಳಗೆ ಕಾಡ್೯ ವಾಪಸ್ಸು ಮಾಡಿ :
ಸರ್ಕಾರ ನಿಗದಿಪಡಿಸಿದ ಮಾನದಂಡ ಮೀರುವಂತಹ ಕಾರ್ಡುದಾರರು ತಮ್ಮ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಮಾರ್ಚ್ 31 ರೊಳಗೆ ಸಮಯ ನೀಡಲಾಗುತ್ತದೆ.
ಏಪ್ರಿಲ್ ಬಳಿಕ ಸರ್ಕಾರ ಕಾರ್ಡ್‌ದಾರರ ಪರಿಶೀಲನೆ ನಡೆಸಲಾಗುವುದು. ಒಂದು ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್ ಕಾರ್ಡ್ ಹೊಂದಿದ್ದು ಗೊತ್ತಾದರೆ ಅಂಥವರಿಗೆ ದಂಡದ ಜತೆ ಶಿಕ್ಷಾರ್ಹ ಅಪರಾಧ ಎಂದು ಪರಿಗಣಿಸಿ ಪೋಲಿಸರು ಕೇಸು ದಾಖಲಿಸುತ್ತಾರೆಂದು ಸಚಿವ ಕತ್ತಿ ಹೇಳಿದರು.
ಸಮೀಕ್ಷೆ ನಡೆಸಲು ನಿರ್ಧಾರ :
ಸರ್ಕಾರಿ ಅಧಿಕಾರಿಗಳು, ನೌಕರರು, ಅರೆ ಸರ್ಕಾರಿ ಅಧಿಕಾರಿಗಳು, ಹಾಗೂ ವಾರ್ಷಿಕ 1.20 ಲಕ್ಷ ರು ಆದಾಯ ಇರುವವರು ಬಿಪಿಎಲ್ ಕಾರ್ಡ್ ಹೊಂದಿರಲು ಸಾಧ್ಯವೇ ಇಲ್ಲ. ಅದರೂ ಕೆಲ ಅಧಿಕಾರಿಗಳು ಬಿಪಿಎಲ್ ಕಾರ್ಡ್ ಹೊಂದಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಹೀಗಾಗಿ ಅವರಿಗೆ ಮತ್ತೊಂದು ಅವಕಾಶ ನೀಡಲಾಗಿದೆ. ಮಾರ್ಚ್ ಅಂತ್ಯದ ವರೆಗೆ ಸ್ವಯಂ ಪ್ರೇರಿತವಾಗಿ ಬಿಪಿಎಲ್ ಕಾರ್ಡ್ ಸರ್ಕಾರಕ್ಕೆ ಹಿಂದಿರುಗಿಸಲು ಸೂಚನೆ ನೀಡಲಾಗಿದೆ. ಇದಾದ ಬಳಿಕ ಖುದ್ದು ಸರ್ಕಾರವೇ ಸರ್ವೇ ನಡೆಸಿ ಇಂಥವರ ಪತ್ತೆ ಹಚ್ಚಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಏಪ್ರಿಲ್ ತಿಂಗಳಿನಿಂದ ಉತ್ತರದ ಜಿಲ್ಲೆಗಳಿಗೆ ಅಕ್ಕಿ ಜತೆ ಜೋಳ ಹಾಗೂ ದಕ್ಷಿಣದ ಜಿಲ್ಲೆಗಳಿಗೆ ಅಕ್ಕಿ(Rice) ಜತೆ ರಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
- ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು