ಪೆಟ್ರೋಲ್ ಬೆಲೆ ದಾಖಲೆಯ 100 ರು ಗಡಿ ದಾಟಿದ ಬೆನ್ನಲ್ಲೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ತೈಲ ಬೆಲೆ ಸಂಬಂಧಿಸಿದಂತೆ ಮೌನ ಮುರಿದು ಕಾರಣಗಳನ್ನು ನೀಡಿದ್ದಾರೆ.
ಈಗಿನ ತೈಲ ದರ ಏರಿಕೆಗೆ ಹಿಂದಿನ ಸರ್ಕಾರದ ನೀತಿಯೇ ಕಾರಣ ಎಂದು ಮೋದಿ ಅವರು ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ತಮಿಳುನಾಡಿನಲ್ಲಿ ತೈಲ ಮತ್ತು ಅಡುಗೆ ಅನಿಲಕ್ಕೆ ಸಂಬಂಧಿಸಿದ ಪ್ರಮುಖ ಯೋಜನೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಒಂದು ವೇಳೆ ಹಿಂದಿನ ಸರ್ಕಾರಗಳು ತೈಲ ಆಮದು ಅವಲಂಬನೆಗೆ ಕಡಿವಾಣ ಹಾಕಿದ್ದರೆ ಇಂದು ಮಧ್ಯಮ ವರ್ಗಕ್ಕೆ ಸಮಸ್ಯೆ ಆಗುತ್ತಿರಲಿಲ್ಲ. ನಮ್ಮ ಸರ್ಕಾರ ತೈಲ ಆಮದು ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ವೈವಿಧ್ಯತೆ ಮತ್ತು ಕೌಶಲತೆ ಹೊಂದಿರುವ ನಾವುಗಳು ಇಂಧನದ ಆಮದಿನ ಮೇಲೆ ಇಷ್ಟೊಂದು ಪ್ರಮಾಣದಲ್ಲಿ ಅವಲಂಬನೆ ಆಗಬೇಕೇ ಎಂದು ಪ್ರಧಾನಿ ಪ್ರಶ್ನಿಸಿದ್ದಾರೆ.
ಪರ್ಯಾಯ ಮಾರ್ಗಗಳು:
ಸರ್ಕಾರಕ್ಕೆ ಮಧ್ಯಮ ವರ್ಗದ ಕಳವಳ ಅರ್ಥವಾಗುತ್ತಿದೆ. ಈ ನಿಟ್ಟಿನಲ್ಲಿ ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣವನ್ನು ಹೆಚ್ಚಿಸುವುದಕ್ಕೆ ಆದ್ಯತೆ ನೀಡುತ್ತಿದ್ದೇವೆ. ಕಬ್ಬಿನಿಂದ ಉತ್ಪಾದಿಸಿದ ಎಥೆನಾಲ್‌ನಿಂದ ತೈಲ ಆಮದನ್ನು ಕಡಿಮೆ ಮಾಡಲು ಮುಂದಾಗುತ್ತಿದ್ದೇವೆ. ಇದರಿಂದಾಗಿ ರೈತರಿಗೆ ಪರ್ಯಾಯ ಆದಾಯ ಮೂಲವೂ ದೊರೆಯಲಿದೆ ಎಂದರು.
2030ರ ವೇಳೆಗೆ ಶೇ.40ರಷ್ಟುಇಂಧನ ದೇಶದಲ್ಲೇ ಉತ್ಪಾದನೆ ಆಗಲಿದೆ. ಅದೇ ರೀತಿ ತಮ್ಮ ಸರ್ಕಾರ ನೈಸರ್ಗಿಕ ಅನಿಲದ ಪ್ರಮಾಣವನ್ನು ಈಗಿರುವ ಶೇ.6.3ರಿಂದ ಶೇ.15ಕ್ಕೆ ಏರಿಸುವ ನಿಟ್ಟಿನಲ್ಲಿಯೂ ಕಾರ್ಯನಿರ್ವಹಿಸುತ್ತಿದೆ. ಇದರ ಜೊತೆ ನೈಸರ್ಗಿಕ ಅನಿಲವನ್ನು ಜಿಎಸ್‌ಟಿ ಅಡಿಯಲ್ಲಿ ತರುವುದಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಮುಂದಿನ 5 ವರ್ಷದಲ್ಲಿ ಸರ್ಕಾರ 7.5 ಲಕ್ಷ ಕೋಟಿ ರೂ. ಹಣವನ್ನು ತೈಲ ಮತ್ತು ಗ್ಯಾಸ್ ಮೂಲಸೌಕರ್ಯಕ್ಕಾಗಿ ಹೂಡಿಕೆ ಮಾಡಲಿದೆ. ಭಾರತಕ್ಕೆ ಬಂದು ಇಂಧನ ಕ್ಷೇತ್ರದಲ್ಲಿ ಹೂಡಿಕೆ ಮಾಡಿ ಎಂದು ಈ ವೇಳೆ ಮೋದಿ ವಿಶ್ವಕ್ಕೆ ಕರೆ ನೀಡಿದರು.
ನೈಸರ್ಗಿಕ ಅನಿಲ ಜಿಎಸ್‌ಟಿ ವ್ಯಾಪ್ತಿಗೆ ಸೇರಿಲ್ಲ. ಈಗಲೂ ಇದರ ಮೇಲೆ ಈ ಹಿಂದೆ ಇದ್ದಂತೆ ಕೇಂದ್ರ ಅಬಕಾರಿ ಸುಂಕ, ರಾಜ್ಯಗಳ ವ್ಯಾಟ್, ಕೇಂದ್ರ ಸೇವಾ ತೆರಿಗೆಯನ್ನು ಹಾಕಲಾಗುತ್ತಿದೆ ಎಂದರು.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್