ಪಕ್ಷದಿಂದ ನನಗೆ ಶೋಕಾಸ್ ನೋಟಿಸ್ ಬಂದಿರುವುದು ನಿಜ. ಅದಕ್ಕೆ 11 ಪುಟಗಳ ಉತ್ತರ ನೀಡಿದ್ದೇನೆ. ನಾನು ಎಲ್ಲೂ ಕ್ಷಮೆ ಅಥವಾ ವಿಷಾದ ವ್ಯಕ್ತಪಡಿಸಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಯತ್ನಾಳ್ ಸಿಎಂ ಯಡಿಯೂರಪ್ಪರಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ ಎಂಬುದನ್ನು ಪತ್ರದಲ್ಲಿ ಪ್ರಸ್ತಾಪಿಸಿದ್ದೇನೆ. ಪಕ್ಷಕ್ಕೆ ದ್ರೋಹ ಬಗೆದು ಯಡಿಯೂರಪ್ಪ ಅವರ ಕುಟುಂಬ ರಾಜಕಾರಣವನ್ನು ಹೇಗೆ ಮಾಡುತ್ತದೆ ಎನ್ನುವುದನ್ನು 45 ಪ್ಯಾರಾದಲ್ಲಿ ಬರೆದಿದ್ದೇನೆ ಎಂದರು.
ಯಡಿಯೂರಪ್ಪ ಕುಟುಂಬ ಬಿಜೆಪಿ ಶಾಸಕರನ್ನು ಗೌರವಿಸುತ್ತಿಲ್ಲ. ಬಿಜೆಪಿ ಆಶಯಕ್ಕೆ ತಕ್ಕಂತೆ ಅಧಿಕಾರ ನಡೆಸುತ್ತಿಲ್ಲ. ಯಡಿಯೂರಪ್ಪ ಅವರ ಕುಟುಂಬದ ಬಗ್ಗೆ ಸಮಗ್ ತನಿಖೆಗೆ ಒತ್ತಾಯಿಸಿದ್ದೇನೆ ಎಂದು ಹೇಳಿದರು.
ಬಿಹಾರದ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಎಷ್ಟು ಹಣ ಕಳುಹಿಸಿದ್ದಾರೆ? ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮುಖಾಂತರ ಆರ್‌ಜೆಡಿ, ಕಾಂಗ್ರೆಸ್ಗೆ ವಿಜಯೇಂದ್ರ ಎಷ್ಟು ಹಣ ಕಳುಹಿಸಿದ್ದಾರೆ? ಎನ್ನುವ ಪ್ರಶ್ನೆ ಎತ್ತಿದ್ದೇನೆ. ಆ ಪ್ರಶ್ನೆಗೆ ವಿಜಯೇಂದ್ರ ಉತ್ತರಿಸಬೇಕು. ಭ್ರಷ್ಟಾಚಾರ, ಹಸ್ತಕ್ಷೇಪ, ವರ್ಗಾವಣೆ ದಂಧೆ ಬಗ್ಗೆ ತನಿಖೆ ಮಾಡಬೇಕು ಎಂದು ಪತ್ರದಲ್ಲಿ ಹೇಳಿದ್ದೇನೆ ಎಂದರು.
ನೋಟಿಸ್ಗೆ ಉತ್ತರ ಕೊಡುವಾಗ ಪತ್ರದಲ್ಲಿ ಎಲ್ಲೂ ಕ್ಷಮೆಯಾಚಿಸಿಲ್ಲ. ಅಥವಾ ವಿಷಾದ ವ್ಯಕ್ತಪಡಿಸಿಲ್ಲ. ಪ್ರತಿ ಪ್ಯಾರದ ವಿಚಾರಗಳನ್ನು ಹಂತ ಹಂತವಾಗಿ ಮಾಧ್ಯಮದ ಮುಂದೆ ಹೇಳುತ್ತೇನೆ ಎಂದರು.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ