ಕಳೆದ ಎರಡು ಚುನಾವಣೆಯಲ್ಲಿ ಸುಳ್ಳು ಅಫಿಡವಿಟ್ ನೀಡಿದ ಆರೋಪದಲ್ಲಿ ಸಚಿವ ನಾರಾಯಣಗೌಡಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
2013, 2018 ಮತ್ತು ಉಪ ಚುನಾವಣೆಯ ಅಫಿಡವಿಟ್‍ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ. ಆದಾಯಕ್ಕಿಂತ ಕಡಿಮೆ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆಂಬುದು ಆರೋಪ.
ಪತ್ನಿ ಹೆಸರಲ್ಲಿ ಶೇ.5000ರಷ್ಟು ಆಸ್ತಿ ಹೆಚ್ಚಳವಾಗಿದೆ. ಆದರೂ ಆದಾಯದ ಮೂಲ ಯಾವುದು ಅಂತ ತೋರಿಸಿಲ್ಲ. ಲೋಕಾಯುಕ್ತಕ್ಕೆ ಸರಿಯಾದ ಅಫಿಡವಿಟ್ ಸಲ್ಲಿಸಿದ್ದಾರೆ. ಆದರೆ ಐಟಿ ಇಲಾಖೆಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದರು.
ಈ ದೂರು ಪರಿಶೀಲನೆ ನಡೆಸಿದ ರಾಜ್ಯಪಾಲರು ಮುಂದಿನ ಕ್ರಮಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಯವರಿಗೆ ಆದೇಶಿಸಿದ್ದಾರೆ.
ವಿಚಾರಣೆಗೆ ಆದೇಶಿಸಿಲ್ಲ – ನಾ. ಗೌ :
ಈ ದೂರಿನ ವಿಚಾರಣೆಗೆ ಪ್ರಾಸಿಕ್ಯೂಷನ್‍ಗೆ ಅನುಮತಿ ಕೊಟ್ಟಿಲ್ಲ. ಮುಖ್ಯ ಕಾರ್ಯದರ್ಶಿಗಳಿಗೆ ಮುಂದಿನ ಕ್ರಮಕ್ಕಾಗಿ ವರ್ಗಾಯಿಸಿದ್ದಾರೆ ಅಂತ ಸಚಿವ ನಾರಾಯಣಗೌಡ ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು