ಅಮೆರಿಕದ ನಾಸಾ ಸಂಸ್ಥೆ ಅತಿದೊಡ್ಡ ಹಾಗೂ ಅತ್ಯಾಧುನಿಕ ಪರ್ಸೆವೆರೆನ್ಸ್ ರೋವರ್ ಯಶಸ್ವಿಯಾಗಿ ಮಂಗಳ ಗ್ರಹವನ್ನು ಸ್ಪರ್ಶಿಸಿದೆ.
203 ದಿನಗಳ ಸುದೀರ್ಘ ಪ್ರಯಾಣದ ಬಳಿಕ 293 ಮಿಲಿಯನ್ ಮೈಲು (472 ಮಿಲಿಯನ್ ಕಿ.ಮೀ.) ದೂರ ಕ್ರಮಿಸಿ ನಾಸಾದ ಪರ್ಸೆವೆರೆನ್ಸ್ ರೋವರ್ ಮಂಗಳನ ಅಂಗಳದಲ್ಲಿ ಯಶಸ್ವಿಯಾಗಿ ಕಾಲಿರಿಸಿದೆ. ಇದು ಮಂಗಳ ಗ್ರಹದಲ್ಲಿ ಜೀವಗಳ ಅಸ್ತಿತ್ವದ ಬಗ್ಗೆ ಅಧ್ಯಯನ ನಡೆಸಲಿದೆ.
ದಕ್ಷಿಣ ಕ್ಯಾಲಿಫೋರ್ನಿಯಾದ ನಾಸಾದ ಜೆಡ್ ಪ್ರೊಪಲ್ಷನ್ ಲ್ಯಾಬೋರೇಟರಿಯಲ್ಲಿ ಸ್ಥಳೀಯ ಸಮಯ ಮಧ್ಯಾಹ್ನ 3.55ಕ್ಕೆ ನಾಸಾ ರೋವರ್ ಮಂಗಳ ಗ್ರಹದ ಮೇಲೆ ಇಳಿದಿದೆ.
ಇದು ನಾಸಾದ ಅತ್ಯಂತ ಮಹಾತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದು. ಮಂಗಳ ಗ್ರಹದಲ್ಲಿ ಜೀವಗಳ ಇರುವಿಕೆಯ ಕುರುಹು ಹುಡುಕಲಿದೆ.
ಜುಲೈ 30ರಂದು ಕೇಪ್ ಕ್ಯಾನವರೆಲ್ ಬಾಹ್ಯಾಕಾಶ ಕೇಂದ್ರದಿಂದ ಪರ್ಸೆವೆರೆನ್ಸ್ ರೋವರ್ ಹೊತ್ತ ರಾಕೆಟ್ ಉಡಾವಣೆಗೊಂಡಿತ್ತು. ಒಂದು ಕಾರಿನ ಗಾತ್ರದ ಆರು ಗಾಲಿಗಳಿರುವ ರೋವರ್ 1026 ಕೆ.ಜಿ ತೂಕವಿದೆ.
ಪ್ರಾಚೀನ ಸೂಕ್ಷ್ಮಜೀವಿಯ ಜೀವನದ ಕುರುಹು ಹುಡುಕಾಟ ಸೇರಿದಂತೆ ಮಂಗಳ ಗ್ರಹದ ಭೂವಿಜ್ಞಾನ ಹಾಗೂ ಹಿಂದಿನ ಹವಾಮಾನವನ್ನು ನಿರೂಪಿಸಲು ಜೆಜೆರೊ ಪ್ರಾಚೀನ ಸರೋವರ ಮತ್ತು ನದಿ ಡೆಲ್ಟಾದ ಬಂಡೆ ಹಾಗೂ ಕೆಸರನ್ನು ಸಂಶೋಧನೆ ಮಾಡಲಿದೆ.
ಅಂತಿಮವಾಗಿ ರೋವರ್ ಸಂಗ್ರಹಿಸಿದ ಸ್ಯಾಂಪಲ್‌ಗಳಿಂದ ನಾಸಾ ಹಾಗೂ ಯುರೋಪ್ ಸ್ಪೇಸ್ ಏಜೆನ್ಸಿ (ಇಎಸ್‌ಎ) ವಿಜ್ಞಾನಿಗಳಿಗೆ ಪ್ರಾಚೀನ ಜೀವದ ಕುರುಹುಗಳನ್ನು ಅಧ್ಯಯನ ನಡೆಸಲು ನೆರವಾಗಲಿದೆ.
ನಾಸಾದ ರೋವರ್ ಮಂಗಳ ಗ್ರಹದಲ್ಲಿ ಇಳಿಯುವುದರೊಂದಿಗೆ ಕಳೆದ ಒಂದು ವಾರದೊಳಗೆ ಮಂಗಳ ಗ್ರಹಕ್ಕೆ ಜಗತ್ತಿನ ಮೂರನೇ ಭೇಟಿಯನ್ನು ಸೂಚಿಸುತ್ತದೆ. ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಚೀನಾದ ಬಾಹ್ಯಾಕಾಶ ನೌಕೆಗಳು ಮಂಗಳ ಕಕ್ಷೆಯನ್ನು ತಲುಪಿದ್ದವು. ಈ ಎಲ್ಲ ಮೂರು ಯೋಜನೆಗಳು ಕಳೆದ ವರ್ಷ ಜುಲೈನಲ್ಲೇ ಪ್ರಾರಂಭವಾಗಿದ್ದವು.
ಪರ್ಸವರೆನ್ಸ್ ರೋವರ್ ಅನ್ನು ಭಾರತೀಯ ಮೂಲದ ವಿಜ್ಞಾನಿ ಸ್ವಾತಿ ಮೋಹನ್ ಅವರು ಮಂಗಳ ಗ್ರಹದ ಬಾಹ್ಯಕಾಶ ನಿಲ್ದಾಣದಲ್ಲಿ ಯಶಸ್ವಿಯಾಗಿ ಇಳಿಸಿದ್ದಾರೆ.
- ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
More Stories
ಕರ್ನಾಟಕದಲ್ಲಿ ಡಿಸೆಂಬರ್ 4ರ ತನಕ ಭಾರೀ ಮಳೆ ಮುನ್ಸೂಚನೆ
RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್