December 23, 2024

Newsnap Kannada

The World at your finger tips!

mandya , news , politics

ಡಿಸಿ ನಡೆ , ಹಳ್ಳಿ ಕಡೆ – ಸರ್ಕಾರದ ಹೊಸ ಕಾರ್ಯಕ್ರಮಕ್ಕೆ ಸಚಿವ ಅಶೋಕ್ ಇಂದು ಚಾಲನೆ

Spread the love

ಪ್ರತಿ ತಿಂಗಳ ಮೂರನೇಯ ಶನಿವಾರ ಜಿಲ್ಲಾಧಿಕಾರಿಗಳು ಮತ್ತು ತಾಲೂಕುಗಳ ತಹಶೀಲ್ದಾರರು ಜಿಲ್ಲೆಯ ಗ್ರಾಮಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಗ್ರಾಮಗಳಿಗೆ ಅಧಿಕಾರಿ ವರ್ಗವನ್ನೇ ಕಳಿಸುವ ವಿನೂತನ ಯೋಜನೆಗೆ ಕಂದಾಯ ಸಚಿವ ಆರ್.ಅಶೋಕ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಶನಿವಾರ (ಇಂದು) ರಾಜ್ಯ ಸರ್ಕಾರದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಸಚಿವರು ಆ ಗ್ರಾಮದಲ್ಲಿಯೇ 24 ಗಂಟೆಗಳ ಕಾಲ ತಂಗಲಿದ್ದಾರೆ. ಖುದ್ದು ಸಮಸ್ಯೆಯನ್ನು ಆಲಿಸಲಿದ್ದಾರೆ.

ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಉನ್ನತ ಅಧಿಕಾರಿಗಳು ಖುದ್ದಾಗಿ ಸ್ಪಂಧಿಸಲು ಹಾಗೂ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅವರ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುವಂತೆ ರಾಜ್ಯಸರ್ಕಾರವು ಈ ನೂತನ ಗ್ರಾಮವಾಸ್ತವ್ಯದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಮಾರ್ಗಸೂಚಿಗಳನ್ನು ನೀಡಿದೆ.

ಗ್ರಾಮ ವಾಸ್ತವ್ಯದ ಉದ್ದೇಶ ಏನು?:

  • ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರು ವಾಸ್ತವ್ಯ ದ ವೇಳೆ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದು.
  • ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9 ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮವಹಿಸುವುದು.
  • ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು ಮತ್ತು ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು.
  • ಗ್ರಾಮದಲ್ಲಿ ಸ್ಮಶಾನ ಲಭ್ಯತೆಯ ಬಗ್ಗೆ ಪರಿಶೀಲಿಸುವುದು ಹಾಗೂ ಸ್ಮಶಾನವಿಲ್ಲದಿದ್ದಲ್ಲಿ ಸರ್ಕಾರದ ಆದೇಶಕ್ಕೆ ಕ್ರಮ
  • ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನನ್ನು ಕಾಯ್ದಿರಿಸುವುದು.
  • ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು.
  • ಆಧಾರ ಕಾರ್ಡಿನ ಅನೂಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು.
  • ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು.
  • ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಇದ್ದಲ್ಲಿ ಪರಿಹಾರ ಒದಗಿಸಲು ಕ್ರಮ ಮತ್ತು ಪ್ರವಾಹದ ಹಾನಿ ತಡೆಗಟ್ಟಲು ಸಲಹೆ ನೀಡುವುದು.
  • ಅತಿವೃಷ್ಠಿ, ಅನಾವೃಷ್ಠಿ ಎದುರಿಸಲು ಮುಂಜಾಗೃತೆ ಕ್ರಮವಹಿಸುವುದು.
  • ಹದ್ದು ಬಸ್ತು, ಪೋಡಿ ಮುಕ್ತಗ್ರಾಮ, ದರಕಾಸ್ತು ಪೋಡಿ, ಕಂದಾಯ ಗ್ರಾಮಗಳ ರಚನೆ, ಗ್ರಾಮದಲ್ಲಿ ಎಸ್.ಸಿ., ಎಸ್.ಟಿ., ಬಿ.ಸಿ.ಎಂ. ವಸತಿ ನಿಲಯಗಳಿದ್ದಲ್ಲಿ ಭೇಟಿ ನೀಡಿ ಸುಸ್ಥಿಯಲ್ಲಿರುವ ಬಗ್ಗೆ ಕ್ರಮ ವಹಿಸುವುದು.
  • ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ, ಕಲಿಕಾ ಕ್ರಮ ಇತ್ಯಾದಿ ಬಗ್ಗೆ ಪರಿಶೀಲಿಸುವುದು.
  • ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು ಹಾಗೂ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಲ್ಲಿ ಅವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಆದೇಶಿಸುವುದು,
  • ಗುಡಿಸಲು ರಹಿತ ವಾಸದ ನಿರ್ಮಾಣ ಗ್ರಾಮಗಳಿಗೆ ಭೇಟಿ ನೀಡಿದ ಸಮಯದಲ್ಲಿ ಗುಡಿಸಲುಗಳು ಇರುವ ವಾಸದ ಮನೆಗಳನ್ನು ಪತ್ತೆಹಚ್ಚಿ ಲಭ್ಯವಿರುವ ಸರ್ಕಾರದ ವಿವಿಧ ಯೋಜನೆಗಳಡಿ ಮನೆ ಕಟ್ಟಲು ಅನುದಾನ ನೀಡುವಂತೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗೆ ನಿರ್ದೇಶನ ನೀಡುವುದು.
Copyright © All rights reserved Newsnap | Newsever by AF themes.
error: Content is protected !!