ಎಲ್ಲಾ ಸಿಬ್ಬಂದಿಗಳಿಗೂ ಕಡ್ಡಾಯ ಲಸಿಕೆ:‌ ಆರೋಗ್ಯ ಸಚಿವ ಸುಧಾಕರ್

Team Newsnap
1 Min Read
Siddu will not win in Kolar : Minister Sudhakarಸಿದ್ದು ಕೋಲಾರದಲ್ಲಿ ಗೆಲ್ಲುವುದಿಲ್ಲ - ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್‌
  • ಕೇರಳ, ಮಹಾರಾಷ್ಟ್ರದಿಂದ ಬರುವವರು ನೆಗೆಟಿವ್ ವರದಿ ಹೊಂದಿರಬೇಕು

ಕೋವಿಡ್ ಲಸಿಕೆಯನ್ನು ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಪಡೆಯಬೇಕು. ಇದು ಎರಡನೇ ಅಲೆ ಬಾರದಂತೆ ತಡೆಗಟ್ಟಲು ನೆರವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸೂಚನೆ ನೀಡಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರು ಉಚಿತವಾಗಿ ಲಸಿಕೆ ದೊರೆಯುವಂತೆ ಮಾಡಿರುವಾಗ ಉದಾಸೀನ ಮಾಡಬಾರದು. ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕೋವಿಡ್ ಲಸಿಕೆ ಪಡೆಯಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ವೀಡಿಯೋ ಸಂವಾದ ನಡೆಸಿ ಸೂಚನೆ ನೀಡಲಿದ್ದಾರೆ ಎಂದರು.

ಲಸಿಕೆ ಪಡೆದ ಬಳಿಕ ಸೋಂಕಿನ ತೀವ್ರತೆ ಕಡಿಮೆಯಾಗುತ್ತದೆ. ಅದರಿಂದ ಸಾವು ಉಂಟಾಗುವುದಿಲ್ಲ. ಸಾರ್ವಜನಿಕರು ಇನ್ನೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮದುವೆ ಮೊದಲಾದ ಸಮಾರಂಭ, ಸಭೆಗಳು ಹೆಚ್ಚುತ್ತಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳಬೇಕು ಎಂದರು.

ನಮ್ಮಲ್ಲಿ ಸೋಂಕಿತರ ಪ್ರಮಾಣ ಕಡಿಮೆ ಇದೆ. ಬಹಳ ದೊಡ್ಡ ಕಠಿಣ ಕ್ರಮಗಳು ಈಗ ಬೇಕಿಲ್ಲ. ಮುಂದಿನ ದಿನಗಳಲ್ಲಿ ಎರಡನೇ ಅಲೆ ಬರುವುದನ್ನು ತಡೆಗಟ್ಟಲು ಸಫಲವಾದರೆ ಲಾಕ್ ಡೌನ್ ಮೊದಲಾದ ಕ್ರಮಗಳ ಪ್ರಶ್ನೆಯೇ ಬರುವುದಿಲ್ಲ ಎಂದರು.

Share This Article
Leave a comment