ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಹಾರ ಮೂಲದ ರಾಜೇಶ್ ಗುಪ್ತಾ ಎಂಬಾತ 10 ವರ್ಷದ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮೀಷವೊಡ್ಡಿ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಬಂಧಿತ ಆರೋಪಿ ರಾಜೇಶ್ ಮೂಲತಹ ಬಿಹಾರದವನು ಬೆಂಗಳೂರಿನ ನಾಗೇನಹಳ್ಳಿ ಸೆಕ್ಯೂರಿಟಿ ಗಾರ್ಡಾಗಿ ಕೆಲಸ ಮಾಡುತ್ತಿದ್ದು ,ನೇಪಾಳ ಮೂಲದ ಬಾಲಕಿಯ ಪೋಷಕರು ನಾಗೇನಹಳ್ಳಿ ಅಪಾರ್ಟ್ಮೆಂಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಆರೋಪಿ ರಾಜೇಶ್ ಶನಿವಾರ ರಾತ್ರಿ ಬಾಲಕಿಗೆ ಚಾಕೊಲೇಟ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದು ,ಈ ಬಗ್ಗೆ ಬಾಲಕಿ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದು ತಕ್ಷಣ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು
ಹೆಬ್ಬಾಳ ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಿ ಎಫ್‌ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.
More Stories
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ