March 31, 2023

Newsnap Kannada

The World at your finger tips!

heart attack , death , Girl

A 13-year-old girl suffered a heart attack and died after suddenly collapsing 13 ವರ್ಷದ ಬಾಲಕಿಗೆ ಹೃದಯಾಘಾತ : ದಿಢೀರ್​​​ ಕುಸಿದು ಬಿದ್ದು ಸಾವು

13 ವರ್ಷದ ಬಾಲಕಿಗೆ ಹೃದಯಾಘಾತ : ದಿಢೀರ್​​​ ಕುಸಿದು ಬಿದ್ದು ಸಾವು

Spread the love

ಹೃದಯಾಘಾತದಿಂದ 13 ವರ್ಷದ ಬಾಲಕಿಯೊಬ್ಬಳು ಮೃತ ಪಟ್ಟಿರೋ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ವ್ಯಾಪ್ತಿಯ ತಲ್ಲೂರಿನಲ್ಲಿ ನಡೆದಿದೆ.

ಅನುಶ್ರೀ (13) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿನಿ ಹಟ್ಟಿಯಂಗಡಿಯ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯ 8ನೇ ತರಗತಿ ಓದುತ್ತಿದ್ದಳು. ಮಂಡ್ಯದ ಶಿವಪುರ ಸತ್ಯಾಗ್ರಹಸೌಧದಲ್ಲಿ ಮೊಳಗಿದ ಕೋಟಿ ಕಂಠ ಗಾಯನ

ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿಯಾಗಿದ್ದಾಳೆ. ಇನ್ನು ಅನುಶ್ರೀ ಮನೆಯಲ್ಲಿ ಓದುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾಳೆ.

ಅನುಶ್ರೀ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ ರವಾನಿಸಲಾಗಿದೆ. ಮೃತಪಟ್ಟ ಅನುಶ್ರೀಯ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿ ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

error: Content is protected !!