December 26, 2024

Newsnap Kannada

The World at your finger tips!

WhatsApp Image 2022 01 18 at 10.22.52 PM

ಹುಬ್ಬಳ್ಳಿಯಲ್ಲಿ ಬ್ಯಾಂಕ್ ದರೋಡೆ ಮಾಡಿ ಸಿಕ್ಕಿಬಿದ್ದ ಕಳ್ಳ ಮದುಮಗ

Spread the love

ಮದುವೆಗೆ ಇನ್ನೆರಡು ದಿನವಷ್ಟೇ ಬಾಕಿ ಇರುವಾಗಲೇ ತನ್ನ ಕೈಚಳಕ ತೋರಲು ಮುಂದಾಗಿದ್ದ ಕಳ್ಳ ಪೊಲೀಸರ ಅತಿಥಿಯಾಗಿದ್ದಾನೆ.
ಹಸೆಮಣೆ ಏರಬೇಕಿದ್ದ ಮದುಮಗ ಈಗ ಕಂಬಿ ಎಣಿಸುತ್ತಿದ್ದಾನೆ.

ಹುಬ್ಬಳ್ಳಿಯಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಿ ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಮತ್ತು ನಾಗರಿಕರು ಹಿಡಿದಿದ್ದಾರೆ.

ವಿಜಯಪುರದ ಪ್ರವೀಣಕುಮಾರ್ ಅಪ್ಪಾಸಾಹೇಬ್ ಪಾಟೀಲ ಬಂಧಿತ. ಈತ ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ

ಪ್ರವೀಣ, ಕಳೆದ ಎರಡು ದಿನದ ಹಿಂದೆ ಹುಬ್ಬಳ್ಳಿಗೆ ಬಂದು ಭಾರತಿ ಲಾಡ್ಜ್ ನಲ್ಲಿ ತಂಗಿದ್ದ.

ಇಂದು ಕೊಪ್ಪಿಕರ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕಿಗೆ ನುಗ್ಗಿ ಕ್ಯಾಷಿಯರ್‌ಗೆ ಚಾಕು ತೋರಿಸಿ, ಬ್ಯಾಗಿನಲ್ಲಿ ಸುಮಾರು 7 ಲಕ್ಷಕ್ಕೂ ಹೆಚ್ಚು ಹಣವನ್ನು ಹಾಕಿಸಿದ್ದಾನೆ. ತಕ್ಷಣವೇ ಪರಾರಿಯಾಗಲು ಯತ್ನಿಸಿದಾಗ, ಬ್ಯಾಂಕಿನ ಮಹಿಳಾ ಸಿಬ್ಬಂದಿ ಕೂಗಿಕೊಂಡಿದ್ದಾರೆ.

ಕೊಪ್ಪಿಕರ ರಸ್ತೆಯ ಮೆಟ್ರೋ ಪೊಲೀಸ್ ಹೋಟೆಲ್ ಬಳಿ ಕರ್ತವ್ಯನಿರತ ದಕ್ಷಿಣ ಸಂಚಾರಿ ಠಾಣೆಯ ಪೊಲೀಸ್ ಉಮೇಶ ಹಾಗೂ ಉಪನಗರ ಠಾಣೆಯ ಪೇದೆಯೊಬ್ಬರು ಆರೋಪಿಯನ್ನು ಹಣದ ಸಮೇತ ಹಿಡಿದಿದ್ದಾರೆ.
ಆರೋಪಿ ಪ್ರವೀಣನ ಮದುವೆ ಇನ್ನೆರಡು ದಿನದಲ್ಲಿ ವಿಜಯಪುರದಲ್ಲಿ ನಡೆಯುವುದಿತ್ತು ಎಂಬುದು ವಿಚಾರಣೆಯಿಂದ ಗೊತ್ತಾಗಿದೆ.

Copyright © All rights reserved Newsnap | Newsever by AF themes.
error: Content is protected !!