ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನವ ದಂಪತಿ ಸಾವನಪ್ಪಿದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ನಡೆದಿದೆ.
ರಘು (35) ಹಾಗೂ ಅನುಷಾ (28) ಮೃತ ನವ ದಂಪತಿ.7 ನೇ ವೇತನಾ ಆಯೋಗದ ಪ್ರಶ್ನೆಗಳಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಉತ್ತರಗಳು
ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಳನಹಳ್ಳಿಯಿಂದ ಬಳ್ಳಾರಿಗೆ ಮದುವೆಗೆ ಹೋಗುತಿದ್ದರು. ಈ ವೇಳೆ ಹುಳಿಯಾರ್ ಗೇಟ್ ಬಳಿ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ದಂಪತಿ ಅಸುನೀಗಿದ್ದಾರೆ.
ಹಾಸನ ಜಿಲ್ಲೆ ಅರಸಿಕೇರೆ ಮೂಲದ ರಘು ಹಾಗೂ ಚಿಕ್ಕನಾಯಕನಹಳ್ಳಿಯ ತಿಗಳನಹಳ್ಳಿಯ ಅನುಷಾ ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು.
ಇಬ್ಬರೂ ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿದ್ದು, ಪ್ರೀತಿಸಿ ಮದುವೆ ಆಗಿದ್ದರು. ಘಟನೆ ಸಂಬಂಧ ಹುಳಿಯಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
- ಹುಲಿ ಉಗುರು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್: ನಾಲ್ಕು ಉಗುರು ವಶಕ್ಕೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ