ಕಾರೊಂದು ಮರಕ್ಜೆ ಡಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದ ಘಟನೆ
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ಕಳೆದ ರಾತ್ರಿ ಜರುಗಿದೆ.
ಕುಂದಾಪುರ ಮೂಲದ ಧೃತಿ (5), ಗೀತಾ(32), ಶಾರದಾ (60) ಮೃತ ದುರ್ದೈವಿಗಳು.
ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ದುರ್ಘಟನೆ ನಡೆದಿದೆ.
ಕಾರಿನಲ್ಲಿದ್ದವರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
More Stories
ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ
ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆ ಕಮೀಷನರ್ ನೇಮಕ
ರಾಜ್ಯ ಸರ್ಕಾರದಿಂದ 11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ