ಮಂಡ್ಯದ ಗಾಮನಹಳ್ಳಿ ಬಳಿ ನಾಲೆಗೆ ಉರುಳಿದ ಕಾರು – ನಾಲ್ವರ ಮಹಿಳೆಯರ ದುರಂತ ಸಾವು

Team Newsnap
1 Min Read

ಶ್ರೀರಂಗಪಟ್ಟಣ :

ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟ ಘಟನೆ ಕಳೆದ ರಾತ್ರಿ ಶ್ರೀರಂಗಪಟ್ಟಣದ ತಾಲೂಕಿನ ಗಾಮನಹಳ್ಳಿ ಬಳಿ ಸಂಭವಿಸಿದೆ

ರಾತ್ರಿ 8.30ರ ಸುಮಾರಿಗೆ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಶಾಖಾ ನಾಲೆಗೆ ಕಾರು ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಐವರ ಪೈಕಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ.

ಮೃತ ಮಹಿಳೆಯರನ್ನು ಟಿ.ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಹಾಗೂ ಸಂಬಂಧಿಕರಾದ ರೇಖಾ, ಸಂಜನಾ, ಮಹದೇವಿ ಎಂದು ಗುರುತಿಸಲಾಗಿದೆ. ಕಾರು ಚಾಲಕ ಮನೋಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಪೊಲೀಸರು ನಾಲ್ವರು ಮಹಿಳೆಯರ ಶವವನ್ನು ನಾಲೆ ನೀರಿನಿಂದ ಹೊರ ತೆಗೆದಿದ್ದಾರೆ‌.

ಮರಣೋತ್ತರ ಪರೀಕ್ಷೆಗಾಗಿ ಮಂಡ್ಯ ಆಸ್ಪತ್ರೆಗೆ ಸಾಗಿಸಿದ್ದಾರೆ.ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment