December 22, 2024

Newsnap Kannada

The World at your finger tips!

VC cannal accident

ಮಂಡ್ಯದ ವಿಸಿ ನಾಲೆಗೆ ಕಾರು ಬಿದ್ದು ಓರ್ವ ದುರ್ಮರಣ

Spread the love

ಮಂಡ್ಯ: ಮಂಡ್ಯದ ವಿಸಿ ನಾಲೆಯಲ್ಲಿ ತಡೆಗೋಡೆ ಇಲ್ಲದ ಕಾರಣ ಮತ್ತೊಂದು ದುರಂತ ಜರುಗಿದ್ದು , ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ನಾಲೆಗೆ ಶಿಫ್ಟ್ ಕಾರು (Swift Car) ಉರುಳಿ ,ಕಾರು ಸಂಪೂರ್ಣ ಜಖಂ ಆಗಿದೆ.

ಇದರಿಂದಾಗಿ ಇಬ್ಬರ ಪೈಕಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು , ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಇಬ್ಬರ ವಿಳಾಸ ಇನ್ನೂ ತಿಳಿದು ಬಂದಿಲ್ಲ.

ಮಿಮ್ಸ್ ಆಸ್ಪತ್ರೆಗೆ ಗಾಯಗೊಂಡ ವ್ಯಕ್ತಿಯನ್ನು ದಾಖಲು ಮಾಡಲಾಗಿದ್ದು , ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.facebook ಲೈವ್ ನಲ್ಲಿ ಭಾವುಕರಾದ ಮೈಸೂರು ಹಾಲಿ ಸಂಸದ ಸಿಂಹ

ವಿಸಿ ನಾಲೆಯ‌ ಹಲವು ಕಡೆ ತಡೆಗೋಡೆ ಇಲ್ಲದ ಕಾರಣ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!