ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

Team Newsnap
1 Min Read

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತವೆಂದು ಗುರುತಿಸಲಾದ ಪಟ್ಟೆ ತಲೆ ಹೆಬ್ಬಾತುಗಳನ್ನು ಕೂಡಿಹಾಕಿ ಸಾಕಿದ ಆರೋಪದಲ್ಲಿ ದೂರು ದಾಖಲಾಗಿದೆ.

ಶುಕ್ರವಾರ ರಾತ್ರಿ ಅರಣ್ಯ ಇಲಾಖೆ ಅಧಿಕಾರಿಗಳು ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿ, ಮಂಗೋಲಿಯಾ ಮೂಲದ ವಲಸೆ ಹಕ್ಕಿಗಳಾದ 4 ಪಟ್ಟೆ ತಲೆ ಹೆಬ್ಬಾತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಾಲ್ಕು ವಿದೇಶಿ ಹಕ್ಕಿಗಳನ್ನು ರಕ್ಷಣೆ ಮಾಡಲಾಗಿದೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದನ್ನು ಓದಿ – ನಟ ದರ್ಶನ್ ಫಾರಂ ಹೌಸ್ ಮೇಲೆ ಅರಣ್ಯಾಧಿಕಾರಿಗಳ ದಾಳಿ

darshan

ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿರುವ ಅರಣ್ಯಾಧಿಕಾರಿಗಳು ಇವು ವಿರಳವಾದ ಪಕ್ಷಿಗಳಾಗಿದ್ದು, ಖಜಕಿಸ್ತಾನ, ಮಂಗೋಲಿಯಾ ಭಾಗದಲ್ಲಿ ಕಂಡುಬರುತ್ತವೆ. ಆ ಪ್ರದೇಶಗಳಲ್ಲಿ ಶೀತದ ವಾತಾವರಣ ಹೆಚ್ಚಿದಾಗ ರಕ್ಷಣೆಗಾಗಿ ಹಿಮಾಲಯ ದಾಟಿ ದಕ್ಷಿಣ ರಾಜ್ಯಗಳಿಗೆ ಬರುತ್ತವೆ. ಇವುಗಳನ್ನು ಸೆರೆಹಿಡಿದು ಸಾಕುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪ್ರಕಾರ ಅಪರಾಧವಾಗಿದೆ, ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Share This Article
Leave a comment