ನಟಿ ರಚಿತಾ ರಾಮ್ ವಿರುದ್ದ ಮದ್ದೂರಿನಲ್ಲಿ ಕೇಸು ದಾಖಲು

Team Newsnap
1 Min Read
A case has been registered in Maddur against actress Rachita Ram ನಟಿ ರಚಿತಾ ರಾಮ್ ವಿರುದ್ದ ಮದ್ದೂರಿನಲ್ಲಿ ಕೇಸು ದಾಖಲು

ಗಣರಾಜ್ಯೋತ್ಸವ ಆಚರಣೆಗೆ ಅಪಮಾನ ಮಾಡಿದ ಆರೋಪದ ಮೇಲೆ ಸ್ಯಾಂಡಲ್​ವುಡ್​ನ ಡಿಂಪಲ್​ ಕ್ವೀನ್ ನಟಿ ರಚಿತಾ ರಾಮ್ ವಿರುದ್ಧ ಮಂಡ್ಯ ಜಿಲ್ಲೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಸಂವಿಧಾನಕ್ಕೆ ಮತ್ತು ಗಣರಾಜ್ಯೋತ್ಸವ ದಿನಕ್ಕೆ ರಚಿತರಾಮ್​ ಅಪಮಾನ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿ. ಶಿವಲಿಂಗಯ್ಯ ಒತ್ತಾಯಿಸಿದ್ದಾರೆ.ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ಅಭ್ಯರ್ಥಿ ಹಠಾತ್ ನಿಧನ

ಇತ್ತೀಚೆಗೆ ನಡೆದ ‘ಕ್ರಾಂತಿ’ ಸಿನಿಮಾದ ಬೃಹತ್ ಬಹಿರಂಗ ಕಾರ್ಯಕ್ರಮದಲ್ಲಿ ರಚಿತಾ ರಾಮ್ ಅವರು ಪ್ರತಿ ವರ್ಷ ಜನವರಿ 26ಕ್ಕೆ ಗಣರಾಜ್ಯೋತ್ಸವ ಆಚರಿಸುತ್ತಿದ್ದೀರಿ. ಈ ಬಾರಿ ಗಣರಾಜ್ಯೋತ್ಸವ ಮರೆತು ಕ್ರಾಂತಿ ಉತ್ಸವ ಮಾಡಿ ಎಂದಿದ್ದಾರೆ.

ಇದು ಸಂವಿಧಾನ ವಿರೋಧಿ ಹೇಳಿಕೆಯಾಗಿದೆ. ಸಂವಿಧಾನ ಜಾರಿಯಾದ ದಿನಕ್ಕೆ ಮಾಡಿದ ಅಪಮಾನ ಎಂದು ಸುದ್ದಿಗೋಷ್ಠಿಯಲ್ಲಿ ಶಿವಲಿಂಗಯ್ಯ ಆರೋಪಿಸಿದರು.

Share This Article
Leave a comment