ಕಾರಿಗೆ ಕಂಟೈನರ್ ಡಿಕ್ಕಿ ಹೊಡೆದು 2 ವರ್ಷದ ಮಗುವೂ ಸೇರಿ ಐವರು ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ ಜರುಗಿದೆ.
ಹೈದ್ರಾಬಾದ್‍ನಿಂದ ಕಲಬುರಗಿಯ ಗಾಣಗಾಪುರ ದೇವಸ್ಥಾನಕ್ಕೆ ಹೋಗುತ್ತಿದ್ದ ಕುಟುಂಬ ಬೀದರ್ ತಾಲೂಕಿನ ಭಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತಕ್ಕೆ ಬಲಿ ಆಗಿದೆ.
ಹೈದರಾಬಾದ್‍ನಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿರುವ ಬೇಗಂ ಪೇಟದ ನಿವಾಸಿ ಗಿರಿಧರ್ (45) ಪತ್ನಿ ಅನಿತಾ (36) ಮಯಾಂಕ್ (2 ) ಅನಿತಾ ತಂಗಿ ಮಗಳು ಪ್ರಿಯಾಂಕಾ (15) ಹಾಗೂ ಕಾರು ಚಾಲಕ ದಿನೇಶ್ (35) ಮೃತಪಟ್ಟವರು.
ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ 2 ವರ್ಷದ ಮಯಾಂಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೃತ ಗಿರಿಧರ ಪುತ್ರ 12 ವರ್ಷದ ಹರ್ಷವರ್ಧನಗೆ ಯಾವುದೇ ಗಾಯಗಳಾಗದೇ ಪಾರಾಗಿದ್ದಾನೆ.
ಇನ್ನು ಘಟನೆಯಲ್ಲಿ ಗಾಯಗೊಂಡ ಐವರನ್ನು ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ