ಬೆಂಗಳೂರಿನಲ್ಲಿ ಬೀಗ ಹಾಕಿದ್ದ ಮನೆ ದೋಚುತ್ತಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ, ನಾಗರಾಜ್ ಮತ್ತು ರಮ್ಯ ಬಂಧಿತ ದಂಪತಿ. ಇವರಿಬ್ಬರೂ ಕಳ್ಳತನವನ್ನೇ ವೃತ್ತಿ ಮಾಡ್ಕೊಂಡಿದ್ದರು. ಬೀಗ ಹಾಕಿದ್ದ ಮನೆಗಳು ಇವರ ಟಾರ್ಗೆಟ್ ಆಗಿತ್ತು.
ಮೈಸೂರಿನ ರಮ್ಯ ಮತ್ತು ಬೆಂಗಳೂರಿನ ಉತ್ತರಹಳ್ಳಿ ಮೂಲದ ನಾಗರಾಜ್ ನಡುವೆ ಪರಿಚಯವಾಗಿತ್ತು. ಬಳಿಕ ಇಬ್ಬರೂ ಕೂಡ ಇನ್‍ಸ್ಟಾಗ್ರಾಮ್ ಮೂಲಕ ಚಾಟ್ ಮಾಡಿಕೊಂಡು ಮತ್ತಷ್ಟು ಸ್ನೇಹ ಬೆಳೆಸಿಕೊಂಡಿದ್ದರು.
ಈ ಸ್ನೇಹ ಬಳಿಕ ಪ್ರೀತಿಗೆ ತಿರುಗಿತ್ತು. ನಂತರ ಮದುವೆಯಾಗಿದ್ದರು. ಮದುವೆಯ ಬಳಿಕ ನಾಗರಾಜ್ ಮತ್ತು ರಮ್ಯ ಸೇರಿಕೊಂಡು ಕಳ್ಳತನ ಮಾಡಲು ಶುರು ಮಾಡಿದ್ದರು. ಈಗಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು – ಕುಟುಕಿದ ಡಾ. H C ಮಹದೇವ
ಇಬ್ಬರು ಪ್ರಮುಖ ರಸ್ತೆಗಳಲ್ಲಿ ತಿರುಗಿ ವಸತಿ ಸ್ಥಳಗಳಲ್ಲಿ ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದರು ನಾಗರಾಜ್ ಕಳ್ಳತನ ಮಾಡಲು ಮನೆ ಒಳಗೆ ಹೋಗಿದ್ರೆ ರಮ್ಯ ಬಾಗಿಲಲ್ಲಿ ನಿಂತು ಕಾಯುತಿದ್ಲು. ಯಾರಾದ್ರು ಬಂದ್ರೆ ನಾಗರಾಜ್‍ಗೆ ಸಿಗ್ನಲ್ ಕೊಟ್ಟು ನಂತ್ರ ಸ್ಥಳದಿಂದ ಎಸ್ಕೇಪ್ ಆಗ್ತಿದ್ರು.
ಕದ್ದ ಚಿನ್ನವನ್ನು ರಮ್ಯ ಅಡಮಾನ ಇಟ್ಟು ಹಣ ಪಡೆಯುತ್ತಿದ್ದರು. ಹೀಗೆ ಜೀವನ ನಡೆಸುತ್ತಿದ್ದ ಜೋಡಿ ಇದೀಗ ಪೊಲೀಸರ ಬಲೆಗೆ ಬಿದ್ದಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ