ಪ್ರಕಾಶ್ ಬಡಿಗೇರ್ (34) ಮೃತ ದುರ್ದೈವಿ. ಪ್ರಕಾಶ್ ಬಡಿಗೇರ್ ಮುಧೋಳ ತಾಲೂಕಿನ ಚಿಕ್ಕಾಲಗುಂಡಿ ಗ್ರಾಮದವರು. ಘಟನೆಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಮೂವರಿಗೆ ಗಂಭೀರ ಗಾಯವಾಗಿದ್ದು, 6 ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ 11 ಜನ ಹಿರೇ ಆಲಗುಂಡಿ ಗ್ರಾಮದವರಾಗಿದ್ದಾರೆ.
ಇವರೆಲ್ಲರೂ ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮೋತ್ಸವಕ್ಕೆ ಭಾಗಿಯಾಗಲು ಹೊರಟಿದ್ದರು. ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಘಟನೆ ಸಂಬಂಧಿಸಿ ಸ್ಥಳಕ್ಕೆ ಕೆರೂರು ಪೊಲೀಸ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಸಿದ್ದರಾಮಯ್ಯ ಮನವಿ
ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ಆಗಮಿಸುತ್ತಿದ್ದ ಮುದೋಳ ತಾಲೂಕಿನ ಪ್ರಕಾಶ್ ಬಡಿಗೇರ್ ಎಂಬವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಸುದ್ದಿ ತಿಳಿದು ಆಘಾತವಾಯಿತು. ಮೃತ ಪ್ರಕಾಶ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ನನ್ನ ಹುಟ್ಟುಹಬ್ಬದ ಸಮಾರಂಭಕ್ಕಾಗಿ ದಾವಣಗೆರೆಗೆ ವಾಹನಗಳಲ್ಲಿ ಆಗಮಿಸುವವರು ಅನಗತ್ಯ ಧಾವಂತ ತೋರದೆ ಎಚ್ಚರಿಕೆಯಿಂದ ವಾಹನ ಚಲಾಯಿಸಿಕೊಂಡು ಬರಬೇಕೆಂದು ಕೈಮುಗಿದು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ವಿನಂತಿ ಮಾಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು