ಸಂಪುಟ ಸರ್ಜರಿ ಹೊತ್ತಲ್ಲೇ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ಹೋಗಿದ್ದಾರೆ
ಹೈಕಮಾಂಡ್ ನಾಯಕರಿಂದ ಬುಲಾವ್ ಬಂದ ಬೆನ್ನಲ್ಲೆ ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ.
ನಿನ್ನೆ ಹೈಕಮಾಂಡ್ ನಾಯಕರು ದೂರವಾಣಿ ಕರೆ ಮಾಡಿ ದೆಹಲಿಗೆ ಬರುವಂತೆ ಸೂಚಿಸಿದ್ದರು.
ಅದರಂತೆ ಬಿ.ವೈ ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ. ಸಂಪುಟ ಪುನಾರಚನೆ ಕಸರತ್ತಿನ ನಡುವೆ ವಿಜಯೇಂದ್ರ ದೆಹಲಿಯಾತ್ರೆ ಮಾಡಿರುವದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಯಾತ್ರೆ ಮುನ್ನವೇ ಸಚಿವರ ದಂಡು ದೆಹಲಿಗೆ ತೆರಳಿದೆ. ರಾಜ್ಯ ಸಚಿವ ಸಂಪುಟದ 10ಕ್ಕೂ ಹೆಚ್ಚು ಸಚಿವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಇಂಧನ ಸಚಿವ ಸುನಿಲ್ ಕುಮಾರ್, ಜವಳಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಕಾನೂನು & ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ, ಪಶುಸಂಗೋಪನಾ ಸಚಿವ ಪ್ರಭು ಚೌಹ್ಹಾಣ್, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ದೆಹಲಿಗೆ ಹೋಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು