ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಆ ತಂದೆಗೆ ಅದೇನು ಸಮಸ್ಯೆ ಇತ್ತೋ ಗೊತ್ತಿಲ್ಲ. ತನ್ನ 3 ಮೂರು ಮಕ್ಕಳನ್ನು ನೇಣಿಗೆ ಹಾಕಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಘೋರ ಕೃತ್ಯ ನಡೆದಿರುವುದು ಬೆಂಗಳೂರಿನ ಮೈಕೋ ಲೇಔಟ್ ನ ರಮಣಶ್ರೀ ಎನ್ ಕ್ಲೇವ್ ನಲ್ಲಿ. ಈ ಅಪಾರ್ಟಮೆಂಟ್ ನ ಸೆಕ್ಯುರಿಟಿ ಗಾರ್ಡ್ ಆಗಿದ್ದ ಜನಕರಾಜ್ ಬಿಸ್ತಾ (32) ಈ ಕೃತ್ಯ ಎಸಗಿದ ಅಪರಾಧಿ.
ಬೆಳಿಗ್ಗೆಯಿಂದ ಹೊರಗಡೆ ಎಲ್ಲಾ ಓಡಾಡಿದ ಜನಕರಾಜ್ 11.30 ರ ಸುಮಾರಿಗೆ ತನ್ನ ಮೂವರು ಮಕ್ಕಳಾದ ಸರಸ್ವತಿ (14) ಹೇಮಾವತಿ(9) ಹಾಗೂ ರಾಜ್ ಕುಮಾರ್ (3) ರನ್ನು ನೇಣಿಗೆ ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಲ್ವರ ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಮೈ ಕೋ ಲೆಔಟ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಂಡತಿಯೂ ಆತ್ಮಹತ್ಯೆ
ಜೀವನದಲ್ಲಿ ಜಿಗುಪ್ಸೆ ಬಂದು ಅತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಎರಡು ತಿಂಗಳ ಹಿಂದೆ ಜನಕರಾಜ್ ಪತ್ನಿ ನಂದಾದೇವಿ ಸಹ ಆತ್ಮಹತ್ಯೆಗೆ ಶರಣಾಗಿದ್ದಳು. ಮಕ್ಕಳನ್ನು ನೋಡಿಕೊಳ್ಳಲಾರದೇ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಜನಕರಾಜ್ ಮಕ್ಕಳನ್ನು ನೇಣಿಗೆ ಹಾಕಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು