ಉಡುಪಿಯ ಮಲ್ಪೆ ಬೀಚ್‌ನಲ್ಲಿ ರಾಜ್ಯದ ಮೊದಲ ತೇಲುವ ಸೇತುವೆ ನಿರ್ಮಿಸಲಾಗಿದೆ. ಪ್ರವಾಸಿಗರ ಸುರಕ್ಷತೆ ಹಾಗೂ ಭದ್ರತೆಯ ದೃಷ್ಟಿಯಿಂದ 25 ಲೈಫ್‌ಗಾರ್ಡ್‌ಗಳನ್ನು ನಿಯೋಜಿಲಾಗಿದೆ.
ಮಲ್ಪೆಯಲ್ಲಿ ಶುಕ್ರವಾರ ತೇಲುವ ಸೇತುವೆ ಉದ್ಘಾಟಿಸಿ ಮಾತನಾಡಿದ ಶಾಸಕರಘುಪತಿ ಭಟ್ ಪ್ರವಾಸಿ ತಾಣಗಳಿಗೆ ಹೊಸತನ ನೀಡಿದರೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹೀಗಾಗಿ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ನಿರ್ಮಿಸಿರುವುದು ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾಗಿದೆ ಎಂದರು.
ಪ್ರವಾಸಿಗರನ್ನು ಸೆಳೆಯಲು ಸ್ಥಳೀಯರು ಹೊಸ ಹೊಸ ಪ್ರಯೋಗ ನಡೆಯಬೇಕು. ಮಲ್ಪೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಆವಿಷ್ಕಾರಗಳಿಗೆ ಪ್ರೋತ್ಸಾಹ ನೀಡಲಿದೆ.
ಸೇಂಟ್ ಮೇರಿಸ್ ಐಲ್ಯಾಂಡ್‌ನಲ್ಲಿ ಈಚೆಗೆ ನಡೆದ ಪ್ರವಾಸಿಗರ ಸಾವಿನಿಂದ ಪ್ರವಾಸೋದ್ಯಮಕ್ಕೆ ಪೆಟ್ಟು ಬಿದ್ದಿದ್ದು ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಭದ್ರತೆಗೆ ಹೆಚ್ಚಿನ ಒತ್ತು ನೀಡಲು ಜಿಲ್ಲಾಧಿಕಾರಿ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಪ್ರವಾಸಿಗರ ಭದ್ರತೆಗೆ ದೃಷ್ಟಿಯಿಂದ ಜಿಲ್ಲಾಡಳಿತ ಎರಡು ಜೆಟ್ ಸ್ಕೀಗಳನ್ನು ಖರೀದಿಸಿ ಸೇಂಟ್ ಮೇರಿಸ್ ಐಲ್ಯಾಂಡ್ ಹಾಗೂ ಮಲ್ಪೆ ಬೀಚ್‌ನಲ್ಲಿ ನಿಯೋಜಿಸಲು ನಿರ್ಧರಿಸಿದೆ. ಇದರಿಂದ ಅವಘಡಗಳಾದಾಗ ತಕ್ಷಣ ನೆರವಿಗೆ ಧಾವಿಸಲು ಅನುಕೂಲವಾಗಲಿದೆ ಎಂದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ