January 8, 2025

Newsnap Kannada

The World at your finger tips!

old mysuru , BJP Parva , CM

BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ಎಂಟು ಇಲಾಖೆಯಲ್ಲಿ ಪೂರ್ಣವಾಗಿ ಬಳಕೆಯಾಗದ ಅನುದಾನ: ಸಿಎಂ

Spread the love

ಬಜೆಟ್ ಹಂಚಿಕೆಯ ಅನುಸಾರ ಬಿಡುಗಡೆಯಾದ ಅನುದಾನವನ್ನು ಎಂಟು ಇಲಾಖೆಗಳು ಇನ್ನೂ ಪೂರ್ಣಪ್ರಮಾಣದಲ್ಲಿ ಬಳಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.


ಕೆಲವು ತಾಂತ್ರಿಕ ಕಾರಣಗಳಿಂದಾಗಿ ಇದರಲ್ಲಿ ವಿಳಂಬವಾಗಿದೆ. ಇರುವ ಸಮಸ್ಯೆ ಬಗೆಹರಿಸಿ ಆದಷ್ಟು ಬೇಗ ಅನುದಾನ ಬಳಕೆಗೆ ಕ್ರಮಕ್ಕೆ ಮುಂದಾಗಬೇಕೆಂದು ಸೂಚಿಸಲಾಗಿದೆ ಎಂದರು.


ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(ಕೆಡಿಪಿ)ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಮಂಗಳವಾರ ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ನಂತರ ವರದಿಗಾರರೊಂದಿಗೆ ಮಾತನಾಡಿದರು.


ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನಪರ ಅಭಿವೃದ್ಧಿ ಕಾರ್ಯಕ್ರಮಗಳ ಜಾರಿಗೆ ಮುಂದಾಗುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ನ್ಯಾಯಾಲಯಗಳಲ್ಲಿರುವ ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಇಲಾಖಾವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು.


ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ನೇತೃತ್ವದಲ್ಲಿ ಸಲಹಾ ಸಮಿತಿ ರಚಿಸಲಾಗುವುದು. ಸುಧಾರಣಾ ಕ್ರಮಗಳನ್ನು ಬರುವ ನವೆಂಬರ್ 1 ರಿಂದ ಜಾರಿಗೆ ತರಲಾಗುವುದು ಎಂದು ವಿವರಿಸಿದರು.


ಕಲಬುರ್ಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಕ್ಕಳು ಮತ್ತು ಮಹಿಳೆಯರಲ್ಲಿ ಅಪೌಷ್ಟಿಕತೆ ಸಮಸ್ಯೆ ಹೆಚ್ಚು ಇರುವುದು ಗೊತ್ತಾಗಿದೆ. ಇದನ್ನು ನಿವಾರಿಸಲು ವಿಶೇಷ ಯೋಜನೆ ರೂಪಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಕೆಡಿಪಿ ಪ್ರಗತಿ ಪರಿಶೀಲನೆ ಮಾಡಲಾಗುವುದು ಎಂದರು.

Copyright © All rights reserved Newsnap | Newsever by AF themes.
error: Content is protected !!