crime

ಫೇಸ್ ಬುಕ್ ನಲ್ಲಿ ಪರಿಚಯವಾದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಗ್ರಾಪಂ ಸದಸ್ಯ

ಮಾಡೆಲಿಂಗ್​ ಕೆಲಸದ ಆಮಿಷವೊಡ್ಡಿ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡ ಗ್ರಾ ಪಂ ಸದಸ್ಯನೊಬ್ಬ ಆಕೆಗೆ ಗನ್​ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಯುವತಿಯ ನಗ್ನ ಫೋಟೋಗಳನ್ನು ತೆಗೆದು ಜಾಲತಾಣದಲ್ಲಿ ಅಪ್ಲೋಡ್​ ಮಾಡುವುದಾಗಿ ಬೆದರಿಕೆ ಹಾಕಿರುವ ಪ್ರಕರಣ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷ ಅತ್ಯಾಚಾರ ಆರೋಪಿ.

ಈತನಿಗೆ ಫೇಸ್​ಬುಕ್​ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು. ಆಕೆಗೆ ಮಾಡೆಲಿಂಗ್​ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್​ ನಂಬರ್​ ಪಡೆದಿದ್ದ. ಅಲ್ಲದೆ ತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಅಲ್ಲದೆ ಲಾಕ್​ಡೌನ್​ ಹಿನ್ನೆಲೆ ಬಡವರಿಗೆ ಆಹಾರ್ ಕಿಟ್​ ವಿತರಣೆ ಮಾಡುತ್ತಿರುವ ಫೋಟೋಗಳನ್ನೂ ಆಕೆಗೆ ವಾಟ್ಸ್​ಆಯಪ್​ ಮೂಲಕ ಕಳಿಸಿ ತಾನೊಬ್ಬ ಸಭ್ಯಸ್ಥ, ಪರೋಪಕಾರಿ ಎಂದೂ ವಿಶ್ವಾಸ ಗಿಟ್ಟಿಸಿಕೊಂಡಿದ್ದನಂತೆ.

ಕೆಲಸ ಕೊಡಿಸುವೆ ಈ ಕುರಿತಂತೆ ಸ್ವಲ್ಪ ಮಾತನಾಡಬೇಕಿದೆ ನನ್ನ ಮನೆಗೆ ಬಾ ಎಂದು ತನ್ನ ಚಾಲಕನ ಮೂಲಕ ಓಲಾಕ್ಯಾಬ್ ಬುಕ್ ಮಾಡಿಸಿ ಶಾನಭೋಗನಹಳ್ಳಿಯ ತನ್ನ ಮನೆಗೆ ಯುವತಿಯನ್ನು ಅಹಮದ್ ಪಾಷ ಕಳೆದ ಸೋಮವಾರ ಕರೆಸಿಕೊಂಡಿದ್ದ.

ಮನೆಗೆ ಬಂದ ಯುವತಿ ಮೇಲೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದಕ್ಕೆ ವಿರೋಧಿಸಿದ ಯುವತಿಗೆ ಗನ್​ ತೋರಿಸಿ ಬೆದರಿಸಿದ್ದಾನೆ. ಅಲ್ಲದೆ, ಆಕೆಯ ನಗ್ನ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿಯೂ ಹೆದರಿಸಿದ್ದಾನೆ ಎಂದು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿರುವ ಅಹಮದ್ ಪಾಷ, ಇದೇ ರೀತಿ ಸುಮಾರು 10 ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024