ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಜೆಡಿಎಸ್ ಭದ್ರಕೋಟೆ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಕಾರ್ಯಕ್ರಮ ಆರಂಭಿಸಿದರು.
ಮಂಡ್ಯದ ಪಿಇಎಸ್ ಹೆಲಿಪ್ಯಾಡ್‌ಗೆ ಆಗಮಿಸಿದ ಯೋಗಿ ಸಂಜಯ್ ವೃತ್ತದಿಂದ ರೋಡ್ ಶೋ ನಡೆಸಿದರು. ಯೋಗಿ ಆಗಮಿಸುತ್ತಲೇ ಅವರ ಪರ ಜಯಘೋಷ ಮುಗಿಲು ಮುಟ್ಟಿತು. ರೋಡ್ ಶೋ ಮಹಾವೀರ ವೃತ್ತದವರೆ ಸುಮಾರು 800ಮೀ. ಸಾಗಿ ಕೊನೆಗೊಂಡಿತು. ರೋಡ್ ಶೋ ವೇಳೆ ಜನ ಕಿಕ್ಕಿರಿದು ಸೇರಿದ್ದರು.
ವಿವಿಧ ಕಲಾತಂಡಗಳು, ಪೂರ್ಣಕುಂಭದ ಮೂಲಕ ಸ್ವಾಗತ ಕೋರಿದವು. ಜನರು ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ಸೇರಿದ್ದರು. ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಯೋಗಿ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು.
ಸಂಜಯ್ ವೃತ್ತದಿಂದ ಯೋಗಿ ರೋಡ್ ಶೋ ಆರಂಭಿಸಿ, ತೆರದ ವಾಹನದಲ್ಲಿ ನಿಂತು ಜನರತ್ತ ಕೈ ಬೀಸಿದರು. ಅಶ್ವಥ್ ನಾರಾಯಣ್, ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್, ಮಂಡ್ಯ ಜಿಲ್ಲೆಯ 7 ಕ್ಷೇತ್ರದ ಅಭ್ಯರ್ಥಿಗಳು ಯೋಗಿಗೆ ಸಾಥ್ ನೀಡಿದರು.
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ