ರಾಜ್ಯದಲ್ಲಿ ದಸರಾ ಮುಗಿದ ಮೇಲೆ ಅ.16 ರಿಂದಲೇ 1 ನೇ ತರಗತಿಯಿಂದ 5 ನೇ ತರಗತಿವರೆಗೆ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಉಡುಪಿಯಲ್ಲಿ ಈ ವಿಷಯ ಪ್ರಕಟಿಸಿ, ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಹಲವಾರು ಜಿಲ್ಲೆಯಲ್ಲಿ ಪಾಸಿಟಿವಿಟಿ ಝೀರೋ ಇದೆ. ಶಾಲೆ ಆರಂಭಿಸಬಹುದು ಎಂದು ತಜ್ಞರು ಅಭಿಪ್ರಾಯ ಕೊಟ್ಟಿದ್ದಾರೆ. ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭವಾಗುತ್ತದೆ. ಜೊತೆಗೆ ದಸರಾ ಮುಗಿದ ತಕ್ಷಣ ಬಿಸಿ ಊಟ ಕೂಡ ಆರಂಭವಾಗಲಿದೆ. ಸಿಎಂ ಬೊಮ್ಮಾಯಿ ಕೂಡ ಶೀಘ್ರ ಶಾಲೆ
ಆರಂಭಕ್ಕೆ ಒಲವು ತೋರಿದ್ದಾರೆಂದು ಹೇಳಿದರು.
ಈ ಬಗ್ಗೆ ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆಯುತ್ತಾರೆ. ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಮೇರೆಗೆ ಶೀಘ್ರ ಶಾಲೆ ಆರಂಭಿಸುತ್ತೇವೆ. ಇನ್ನು ಎಲ್ಲರಿಗೂ ಶಾಲೆ ಕಡ್ಡಾಯ ಮಾಡಿಲ್ಲ ಮುಂದೆಯೂ ಕಡ್ಡಾಯ ಮಾಡುವುದಿಲ್ಲ. ಆನ್‌ಲೈನ್, ಆಫ್ ಲೈನ್ ಎರಡು ಮಾದರಿಯಲ್ಲಿ ತರಗತಿಗಳು ನಡೆಯಲಿದೆ ಎಂದು ಸಚಿವ ನಾಗೇಶ್ ಹೇಳಿದರು.
ಉಡುಪಿಯ ಒಳಕಾಡು ನಾರ್ತ್ ಶಾಲೆಗೆ ಬಂದು ಶಾಲೆಯ ವೀಕ್ಷಣೆ ಮಾಡಿದರು. ಶಿಕ್ಷಕರು ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ನಾರ್ಥ್ ಶಾಲೆಯಲ್ಲಿರುವ ಶೈಕ್ಷಣಿಕ ಫೆಸಿಲಿಟಿ ಗಳ ಬಗ್ಗೆ ಮಾಹಿತಿ ಪಡೆದು ಪ್ರಶಂಸೆ ವ್ಯಕ್ತಪಡಿಸಿದರು.
- ಅಂಗನವಾಡಿಗೆ ತೆರಳಿದ್ದ 3 ವರ್ಷದ ಬಾಲಕಿಗೆ ಹಾವು ಕಚ್ಚಿ ದಾರುಣ ಸಾವು
- ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಸಂಚಾರ: ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಸೂಚನೆ
- ಅಪ್ಪನ ಅಕ್ಕರೆ ಮತ್ತು ತ್ಯಾಗ: ಮಗನ ನೆನಪಿನಲ್ಲಿ ಉಳಿದ ಅನನ್ಯ ಕಥೆ
- ಚಾಮರಾಜನಗರ ಬಂದ್: ಬಸ್ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ
- ಹೊಸ ವರ್ಷದ ಹೊಸ್ತಿಲಿನಲ್ಲಿ… ನವ ಆಶಯಗಳ ತೇರನೆಳೆಯೋಣ ಬನ್ನಿ
More Stories
ಅಂಗನವಾಡಿಗೆ ತೆರಳಿದ್ದ 3 ವರ್ಷದ ಬಾಲಕಿಗೆ ಹಾವು ಕಚ್ಚಿ ದಾರುಣ ಸಾವು
ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಸಂಚಾರ: ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಸೂಚನೆ
ಚಾಮರಾಜನಗರ ಬಂದ್: ಬಸ್ಗಳಿಲ್ಲದೆ ವಿದ್ಯಾರ್ಥಿಗಳ ಪರದಾಟ