ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಂಜಲಿ ಮೋಹನ ಅಂಬಿಗೇರ (21) ಕೊಲೆಯಾದ ಯುವತಿ .ಯಲ್ಲಾಪುರ ಓಣಿಯ ಗಿರೀಶ ಅಲಿಯಾಸ್ ವಿಶ್ವ ಎಸ್. ಸಾವಂತ ಎಂಬಾತ ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ಆರೋಪಿ.
ವೀರಾಪುರ ಓಣಿ ಕರಿಯಮನ ಗುಡಿ ನಿವಾಸಿ ಅಂಜಲಿಯು ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿ ಗಿರೀಶ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಆಕೆಯ ಮನೆ ಬಳಿ ಹೋಗಿ ಬಾಗಿಲು ಬಡಿದಿದ್ದಾನೆ.
ಅಂಜಲಿಯೇ ಹೋಗಿ ಬಾಗಿಲು ತೆಗೆಯುತ್ತಿದ್ದಂತೆ ಏಕಾಏಕಿ ಆಕೆಯನ್ನು ಮನೆಯ ಒಳಗೆ ತಳ್ಳಿಕೊಂಡು ಹೋಗಿ ಚಾಕುವಿನಿಂದ ಮನಬಂದಂತೆ ಇರಿದಿದ್ದು ,ಆಕೆ ತಪ್ಪಿಸಿಕೊಳ್ಳಲು ಯತ್ನಿಸಿದರಾದರೂ ಬಿಡದೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಬೆಂಡಿಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳಿಗೆ ಆದ ಹಾಗೆ ನಿನ್ನನ್ನು ಕೊಲೆ ಮಾಡುತ್ತೇನೆ ಎಂದು ಆರೋಪಿ ಗಿರೀಶ್ ಇತ್ತೀಚೆಗೆ ಅಂಜಲಿಗೆ ಧಮ್ಕಿ ಹಾಕಿದ್ದನು .ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್ ಶಾ
ವಿಚಾರ ತಿಳಿದು ಅಂಜಲಿ ಅವರ ಅಜ್ಜಿ ಗಂಗಮ ಪೊಲೀಸರ ಗಮನಕ್ಕೆ ತಂದಾಗ, ಇದೆಲ್ಲಾ ಮೂಢನಂಬಿಕೆ ಎಂದು ಹೇಳಿ ಕಳುಹಿಸಿದ್ದರ ಪರಿಣಾಮ ಇಂದು ಹುಬ್ಬಳ್ಳಿಯಲ್ಲಿ ಯುವತಿಯ ಕೊಲೆಯಾಗಿದೆ .
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ